RCB vs RR | ರಾಯಲ್ಸ್ ಕಾಳಗದಲ್ಲಿ ಗೆಲುವು ಯಾರಿಗೆ..?

1 min read
RCB vs RR Tata IPL 2022 Match 39 Preview saaksha tv

RCB vs RR Tata IPL 2022 Match 39 Preview saaksha tv

ರಾಯಲ್ಸ್ ಕಾಳಗದಲ್ಲಿ ಗೆಲುವು ಯಾರಿಗೆ..?

ಮುಂಬೈ : 15 ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹೀಗಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರಾಯಲ್ಸ್ ಕಾಳಗ ನಡೆಯಲಿದೆ.

15 ನೇ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಬಲಿಷ್ಠವಾಗಿ ಕಾಣುತ್ತಿದೆ. ಆಡಿದ ಎರಡೂ ಪಂದ್ಯಗಳಲ್ಲಿ ದೊಡ್ಡ ಗೆಲುವುಗಳನ್ನ ಗೆದ್ದು, ಧನಾತ್ಮಕ ರನ್ ರೇಟ್ ನೊಂದಿಗೆ ಪಾಯಿಂಟ್ಸ್ ಟೇಬಲ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಇತ್ತ ಫಾಫ್ ಡುಪ್ಲಸಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿದ ಏಳನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುಂಡಿತು. ನಂತರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್ ಗಳ ಗೆಲುವು ಸಾಧಿಸಿದೆ.  

ಹೀಗಾಗಿ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿಗೆ ಗೆಲುವು ಅನಿವಾರ್ಯವಾಗಿದೆ. ಇತ್ತ ಚಾಲೆಂಜರ್ಸ್ ವಿರುದ್ಧ ಗೆದ್ದು ಗೆಲುವಿನ ಅಭಿಯಾನ ಮುಂದುವರೆಸೋದು ರಾಜಸ್ಥಾನ್ ತಂಡದ ಪ್ಲಾನ್ ಕೂಡ ಆಗಿದೆ.

 RCBvsRR fantasy-tips-possible-playing-11-match-prediction  saaksha tv

ಇನ್ನು ಪಿಚ್ ವಿಚಾರಕ್ಕೆ ಬಂದ್ರೆ  ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ ಬೀಳುವ ಮಂಜು ಪಂದ್ಯ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಇಲ್ಲಿ ಯಾರೇ ಟಾಸ್ ಗೆದ್ದರೂ ಚೇಸಿಂಗ್ ಮಾಡಲು ಇಷ್ಟ ಪಡ್ತಾರೆ. ಈವರೆಗೂ ಇಲ್ಲಿ ನಡೆದ ಪಂದ್ಯದಲ್ಲಿ ಸೆಕೆಂಡ್ ಬ್ಯಾಟಿಂಗ್ ಮಾಡಿದವರೇ  ಗೆದ್ದಿದ್ದಾರೆ.

ಇನ್ನು ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ನೋಡೋದಾದ್ರೆ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ನಿರೀಕ್ಷೆ ಮಾಡುವಂತಿಲ್ಲ.

ರಾಜಸ್ಥಾನ ತಂಡ ದಲ್ಲಿ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ಸಿ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ನವದೀಪ್ ಸೈನಿ ಸ್ಥಾನ ಪಡೆಯಲಿದ್ದಾರೆ.

ಬೆಂಗಳೂರು ತಂಡದಲ್ಲಿ ಫಾಫ್ ಡು ಪ್ಲೆಸಿಸ್ (c), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (WK), ಶೆರ್ಫೇನ್ ರುದರ್‌ಫೋರ್ಡ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಸ್ಥಾನ ಪಡೆಯಬಹುದು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd