ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆ ಅಗತ್ಯ ಇರುವ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಸಪೋರ್ಟ್ ಎಕ್ಸಿಕ್ಯೂಟಿವ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಖಾಲಿ ಇರುವ 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ (ಸಿ.ಎಸ್, ಇ&ಸಿ, ಟಿ.ಸಿ, ಐ.ಎಸ್)/ ಬಿ.ಟೆಕ್ (ಸಿ.ಎಸ್, ಇ&ಸಿ, ಟಿ.ಸಿ, ಐ.ಎಸ್)/ ಬಿ.ಎಸ್ಸಿ (ಸಿ.ಎಸ್, ಇ&ಸಿ)/ ಬಿಬಿಎ ಅರ್ಹತೆ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ಅನುಭವ : ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 1 ವರ್ಷಗಳ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಹುದ್ದೆಯ ವಿಧ : ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 2ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು – 560 001
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 14, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 26, 2025








