ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಆರ್ಭಟ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 3,37,704 ಕೊರೊನಾ ಪ್ರಕರಣಗಳು ದಾಖಲಾಗಿವೆ. 488 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 2,42,676 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿದವರಿಗೆ ಮಾತ್ರ ಪರೀಕ್ಷೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ ಸುಧಾಕರ ತಿಳಿಸಿದ್ದಾರೆ.
ರಾಜ್ಯದಲ್ಲಿ ಜಾರಿ ಇರುವ 50:50 ನಿಯಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ನಿನ್ನೆ ತಾನೆ ಹೈದರಾಬಾದ್ ಯಿಂದ ಫ್ಲೈಟ್ ಬಲ್ಲಿ ಬಂದೆ. ವಿಮಾನದಲ್ಲಿ ಇರೋ ಸೀಟ್ ಫುಲ್ ಮಾಡಿಕೊಂಡು ಬಂದರು. ಅಲ್ಲಿ ಅಂತರ ಇಲ್ಲ, 50:50 ನಿಯಮನೂ ಇಲ್ಲ. ಇಲ್ಲಿ ಯಾಕೆ ಅಂತರ. ಲಂಡನಲ್ಲಿ ಎಲ್ಲವೂ ಫ್ರೀ ಬಿಟ್ಟಿಲ್ಲವಾ. ಆಂಧ್ರ, ತೆಲಂಗಾಣದಲ್ಲಿ ಯಾವುದೇ ಕರ್ಪ್ಯೂ ಇಲ್ಲ. ಇಲ್ಲಿ ಯಾಕೆ ಕರ್ಪ್ಯೂ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಬೆಲೆ ಏರಿಯಾಗುತ್ತದೆ ಎಂಬ ಸುದ್ದಿ ತಿಳಿದು ಆತಂಕದಲ್ಲಿದ್ದ ಜನರಿಗೆ, ಸಿಎಂ ಬಸವರಾಜ ಬೊಮ್ಮಾಯಿ ಶುಭ ಸುದ್ದಿ ನೀಡಿದ್ದಾರೆ. ಹಾಲು, ನೀರು, ವಿದ್ಯುತ್ ದರ ಏರಿಸುವಂತೆ ಸರಕಾರಕ್ಕೆ ಪ್ರಸ್ತಾಪ ಬಂದಿದೆ. ಆದರೆ ದರ ಏರಿಕೆಗೆ ಇನ್ನೂ ತೀರ್ಮಾನವಾಗಿಲ್ಲ. ಅವಸರದ ನಿರ್ಧಾರ ಸರಕಾರ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದೇವೇಗೌಡ ಅವರಿಗೆ ಅಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದಿದೆ.ಸದ್ಯ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಗೋವಾ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಪರಿಕ್ಕರ್ ಕೇಸರಿ ಪಡೆಗೆ ಟಕ್ಕರ್ ನೀಡಿದ್ದಾರೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷ ತೊರೆದು ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಧುಮುಖಲಿದ್ದಾರೆ.
ಉತ್ತರ ಭಾರತದ ಹಲವಾರು ಭಾಗಗಳು ತೀವ್ರ ಚಳಿಗೆ ತತ್ತರಿವೆ. ತಾಪಮಾನವು ಐತಿಹಾಸಿಕ ಕನಿಷ್ಠ ಮಟ್ಟಕ್ಕೆ ದಾಖಲಾಗುತ್ತಿದೆ. ಮುಂದಿನ ಎರಡರಿಂದ ಮೂರು ದಿನಗಳಲ್ಲಿ, ಕನಿಷ್ಠ ತಾಪಮಾನವು ಕ್ರಮೇಣ 3 ರಿಂದ 5 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
RRR ಸಿನಿಮಾಗಾಗಿ ಕಾದು ಕುಳಿತಿರುವ ಅಭಿಮಾನಿಗಳಿಗೆ ರಾಜಮೌಳಿ ಗುಡ್ ನ್ಯೂಸ್ ಕೊಟ್ಟು 2 ಹೊಸ ದಿನಾಂಕಗಳನ್ನ ಪ್ರಕಿಟಿಸಿದ್ದಾರೆ. ಮಾರ್ಚ್ 18 ಅಥವಾ ಏಪ್ರಿಲ್ 28ರಲ್ಲಿ ಒಂದು ಡೇಟ್ ನಲ್ಲಿ ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ಆರ್ ಆರ್ ಆರ್ ಬಳಗ ತಿಳಿಸಿದೆ.
ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ ಸಿನಿಮಾ ರೆಡಿಯಾಗ್ತಿದೆ. ಈ ಸಿನಿಮಾಗೆ ಯದುವೀರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.
ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದೆ ಅನ್ನೋದು ನಿಜವಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಉತ್ತುಂಗಕ್ಕೇರಿತ್ತು. ಇದರಲ್ಲಿ ಯಾವುದೇ ಸಂದೇಹವಿಲ್ಲ. ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರ. ಭವಿಷ್ಯದಲ್ಲಿ ತಂಡಕ್ಕೆ ಅವರ ಸೇವೆ ಅಗತ್ಯವಿದೆ. ವಿರಾಟ್ ಗ್ರೇಟ್ ಪ್ಲೇಯರ್ ಎಂದು ಹೊಗಳಿದ್ದಾರೆ.










