ಕೊರೊನಾ.. ಪ್ರೋ ಕಬಡ್ಡಿ ಅಪ್ ಡೇಟ್.. ಓದಿ ಇಂದಿನ ಟಾಪ್ ಫೈವ್ ಸುದ್ದಿ

1 min read
today top news in kannada saaksha tv

ದೇಶದಲ್ಲಿ ಕೊರೊನಾ ಮೂರನೇ ಅಲೆಯ ಅಬ್ಬರ ಮುಂದುವರೆದಿದ್ದು,  ಕಳೆದ 24 ಗಂಟೆಯಲ್ಲಿ 2,68,833 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.  402 ಮಂದಿ ಸೋಂಕಿತರ ಪ್ರಾಣ ಕಳೆದುಕೊಂಡಿದ್ದಾರೆ. 1,22,684 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮಳವಳ್ಳಿ ತಾಲೂಕಿನ ಶಿವನಸಮುದ್ರಂ ಸರ್ಕಾರಿ ಶಾಲೆಯಲ್ಲಿ  ಕೊರೊನಾ ಸ್ಫೋಟಗೊಂಡಿದೆ. ಈ ಶಾಲೆಯಲ್ಲಿ 20 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಶಾಲೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಮಕ್ಕಳಿಗೆ ಕೋವಿಡ್ ಸೆಂಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ.

Today's Top Five News saaksha tv

ಉತ್ತರ ಪ್ರದೇಶ ಚುನಾವನಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿ ನಡೆಸಿ  ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ ಪಟ್ಟಿಯಲ್ಲಿ ಮೊದಲ ಹೆಸರು ಯೋಗಿ ಆದಿತ್ಯನಾಥ್ ಅವರದ್ದಾಗಿದ್ದು, ಗೋರಖ್ ಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕೆಲದಿನಗಳಿಂದ ಯೋಗಿ ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋಲಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಟೀಂ ಇಂಡಿಯಾ ಐದನೇ ಸ್ಥಾನಕ್ಕೆ ಕುಸಿದು ಬಿದ್ದಿದೆ.  ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳೀಕ  ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಪಡೆ ಐದನೇ ಸ್ಥಾನಕ್ಕೆ ಕುಸಿದಿದೆ.

ದೀಪಕ್ ಹೂಡಾ ಹಾಗೂ ಅರ್ಜುನ್ ದೇಶ್ವಾಲ್  ಸೊಗಸಾದ ಆಟದ ನೆರವಿನಿಂದ ಎಂಟನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ನ 53ನೇ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ 38-28 ರಿಂದ ಮಾಜಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡವನ್ನು ಸೋಲಿಸಿತು. ಈ ಗೆಲುವಿನ ಮೂಲಕ ಜೈಪುರ್ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd