ಜೈಲಿಗೆ ಹೋಗಲು ಸಿದ್ಧ : ಸರ್ಕಾರಕ್ಕೆ ಚಂದ್ರಶೇಖರ್ ಸವಾಲ್
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ವಾರ್ನಿಂಗ್ ನೀಡಿದೆ.
ಈ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ” ನಾವೆಲ್ಲ ಸರತಿ ಸಾಲಿನಲ್ಲಿ ನಿಂತು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಸವಾಲ್ ಹಾಕಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತ ಸಾರಿಗೆ ನೌಕರರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪನವರು ಎಸ್ಮಾ ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ್ದಾರೆ.

ಈ ಕಾಯ್ದೆಯನ್ನು ಜಾರಿಗೊಳಿಸಿ ಎಷ್ಟು ಜನರನ್ನು ಜೈಲಿಗೆ ಕಳುಹಿಸುತ್ತೀರಿ..? 1.30ಲಕ್ಷ ನೌಕರರಿದ್ದಾರೆ. ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಜೈಲಿಗೆ ಹೋಗಲು ಸಿದ್ಧರಿದ್ದೀವಿ.
ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಕ್ಕೆ ಕ್ಷಮೆಯಾಚಿಸುತ್ತೇನೆ.
ಅರ್ಧ ಕೂಲಿಕೊಟ್ಟು ಜೀತಕ್ಕಿಟ್ಟುಕೊಂಡಿರುವ ರೀತಿಯಲ್ಲಿ ಸಾರಿಗೆ ನೌಕರರನ್ನು ನಡೆಸಿಕೊಳ್ಳಲಾಗುತ್ತಿದೆ. ದುಡಿಯುವ ಜನರ ವಿರುದ್ಧ ನಾಗರಿಕರು ಸಿಟ್ಟು ಮಾಡಬೇಡಿ. ಸರ್ಕಾರದ ಕಡೆ ಕಣ್ಣು ಬಿಟ್ಟು ನೋಡಿ ಎಂದು ಚಂದ್ರಶೇಖರ್ ಗುಡುಗಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








