ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಉಳಿಯುವುದಾದರೆ, ಅವರು ಆ ಪಕ್ಷದ ಪರವಾಗಿ ಇದ್ದರೆ ಮಾತನಾಡಲು ಸಿದ್ಧ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುಮಲತಾರ ಆಪ್ತ ಸಚ್ಚಿದಾನಂದ ಭೇಟಿ ವಿಚಾರವಾಗಿ ಮಾತನಾಡಿದ ಅವರು, ನಾವು ಸುಮಲತಾ ಅವರನ್ನೂ ಮಾತನಾಡಿಸುತ್ತೇವೆ. ಅವರು ಬಿಜೆಪಿಯಲ್ಲಿಯೇ ಮುಂದುವರೆಯುವುದಾದರೆ ಹಾಗೂ ಪರವಾಗಿದ್ದರೆ ಭೇಟಿಯಾಗಿ ಲೋಕಸಭೆ ಚುನಾವಣೆ ಕುರಿತು ಮಾತುಕತೆ ನಡೆಸುತ್ತೇವೆ. ನಾವೇನು ಮತ್ತೊಬ್ಬರಿಗೆ ತೊಂದರೆ ಕೊಡಲು ಹೋಗುವುದಿಲ್ಲ. ಬಿಜೆಪಿ-ಜೆಡಿಎಸ್‌ನವರು ಸೌಹಾರ್ದಯುತವಾಗಿ ಕೆಲಸ ಮಾಡೋದಕ್ಕೆ ಎಲ್ಲರ ಜೊತೆಗೂ ಮಾತುಕತೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಕಾಂಗ್ರೆಸ್ ನ್ನು ಸಮಾಪ್ತಿ ಮಾಡುತ್ತಾರೆ ಎಂದು ದೇವೇಗೌಡರು ಹೇಳಿದ್ದಾರೆ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.








