ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮುಖ್ಯಮಂತ್ರಿಗಳ ಆ ಒಂದು ನಿರ್ಧಾರದ ಹಿಂದಿನ ಕಾರಣ

admin by admin
March 14, 2020
in Politics, Samagra karnataka
Share on FacebookShare on TwitterShare on WhatsappShare on Telegram

ಜಗತ್ತಿನಾದ್ಯಂತ ಕೊರೋನಾ ಭೀತಿಗೆ ದೇಶಗಳು ತತ್ತರಿಸಿದ್ದು, ಇದೀಗ ಕರ್ನಾಟಕದಲ್ಲಿ ಕೊರೋನಾ ಹರಡುವ ಆತಂಕದಿಂದ ಒಂದು ವಾರಗಳ ಕಾಲ‌ ಮಾಲ್, ಸಿನಿಮಾ ಮಂದಿರಗಳು, ಪಬ್, ಕ್ಲಬ್, ಕ್ರೀಡಾ ಕೂಟ, ಖಾಸಗಿ ಸಮಾರಂಭಗಳನ್ನು ನಡೆಸದಂತೆ ಕರ್ನಾಟಕ ರಾಜ್ಯ ಸರ್ಕಾರ ಆದೇಶ ನೀಡಿದೆ.
ಆದರೆ ಯಾವುದೇ ಕಾರಣಕ್ಕೂ ಬಂದ್ ಮಾಡಲು ಆದೇಶ ನೀಡುವುದಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಆ ನಿರ್ಧಾರ ತೆಗೆದುಕೊಳ್ಳಲು ಕಾರಣ‌ ಆ ಒಂದು ಪ್ರಕರಣವಂತೆ.
ಕೊರೋನಾ ವೈರಸ್ ಸೊಂಕುನಿಂದ ಕಲಬುರಗಿಯಲ್ಲಿ ಸಾವು ಸಂಭವಿಸಿತು ಎಂದು ವರದಿ ಬರುತ್ತಿದ್ದಂತೆ, ಸಿಎಂ ಯಡಿಯೂರಪ್ಪ ವಿಧಾನಸಭೆಯಲ್ಲಿ ಉನ್ನತ ಮಟ್ಟದ ತುರ್ತು ಸಭೆ ಕರೆದರು. ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್, ಡಾ. ದೇವಿಶೆಟ್ಟಿ ಸೇರಿದಂತೆ ಸರ್ಕಾರದ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದ ಆ ಸಭೆಯಲ್ಲಿ ಕೊರೋನಾ ಸೋಂಕು ರಾಜ್ಯದಲ್ಲಿ ಹರಡುತ್ತಿರುವ ಬಗ್ಗೆ ಮಾಹಿತಿ ಕೇಳಿದರು.

Related posts

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

February 20, 2026
2028ರ ಸಿಎಂ ಗಾದಿಗೆ ಈಗಲೇ ಟವಲ್ ಹಾಕಿದ ದಳಪತಿಗಳು: ಕಮಲ ಪಾಳಯದ ಮುಂದೆ ಎಚ್‌ಡಿಕೆ ಇಟ್ಟ ಕಠಿಣ ಷರತ್ತುಗಳೇನು?

2028ರ ಸಿಎಂ ಗಾದಿಗೆ ಈಗಲೇ ಟವಲ್ ಹಾಕಿದ ದಳಪತಿಗಳು: ಕಮಲ ಪಾಳಯದ ಮುಂದೆ ಎಚ್‌ಡಿಕೆ ಇಟ್ಟ ಕಠಿಣ ಷರತ್ತುಗಳೇನು?

February 20, 2026

ಸಭೆಯಲ್ಲಿ ಕಲಬುರುಗಿ ಪ್ರಕರಣದ ಬಗ್ಗೆ ಚರ್ಚೆ ನಡೆದಿದ್ದು, ಸೌದಿ ಅರೇಬಿಯಾದ ಮೆಕ್ಕಾ ಮದೀನಾ ಯಾತ್ರೆ ಮುಗಿಸಿ 76 ವರ್ಷದ ವೃದ್ಧ ಕಲಬುರಗಿಗೆ ಆಗಮಿಸಿದ್ದರು. ಮೆಕ್ಕಾ ಮದೀನಾಕ್ಕೆ ಹೋಗಿ ಬಂದ ಕಾರಣ ಸಂಪ್ರದಾಯದಂತೆ ಹಲವು ಜನ ಇವರ ಕಾಲು ಮುಟ್ಟಿ ನಮಸ್ಕರಿಸಿದ್ದರು.

ಮಾರ್ಚ್‌ 6ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿಶೇಷ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಕೊರೊನಾ ಸೋಂಕಿನಿಂದ ಇವರು ಮೃತಪಟ್ಟ ಹಿನ್ನೆಲೆಯಲ್ಲಿ ಇವರ ಸಂಪರ್ಕದಲ್ಲಿದ್ದ ಒಟ್ಟು 46 ಜನರ ಮೇಲೆ ನಿಗಾ ವಹಿಸಲಾಗಿದ್ದು, ಇದರಲ್ಲಿ 36 ಜನರು ಗಂಭೀರ ಪರಿಣಾಮ (ಹೈ ರಿಸ್ಕ್) ಮತ್ತು 15 ಜನರನ್ನು ಕಡಿಮೆ ಪರಿಣಾಮ (ಲೋ ರಿಸ್ಕ್) ಎಂದು ವಿಂಗಡಿಸಲಾಗಿದೆ ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಂಚಿಕೊಳ್ಳುತ್ತಿದ್ದಂತೆ ಸರ್ಕಾರಕ್ಕೆ ಪರಿಸ್ಥಿತಿಯ ತೀವ್ರತೆಯ ಅರಿವಾಗಿದೆ.

ಕರ್ನಾಟಕ ರಾಜ್ಯದ ಗಡಿ ಕೇರಳದಲ್ಲೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಅಲ್ಲಿಯ ಜನ ಕರ್ನಾಟಕಕ್ಕೆ ಬರುವುದರಿಂದ ಸಮಸ್ಯೆ ಜಾಸ್ತಿಯಾಗಬಹುದು ಎಂದು ಸಭೆಯಲ್ಲಿದ್ದ ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನಲ್ಲೂ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ‌ಏರಿಕೆಯಾಗಿದ್ದು, ಒಂದು ವಾರಗಳ ಕಾಲ ಸಾರ್ವಜನಿಕವಾಗಿ ಜನ ಹೆಚ್ಚು ಸೇರದಂತೆ ಸಾರ್ವಜನಿಕ ಸ್ಥಳವನ್ನು ಬಂದ್ ಮಾಡಿ ಕಾರ್ಯಕ್ರಮಗಳನ್ನು ನಿರ್ಬಂಧಿಸುವುದು ಉತ್ತಮ ಎಂಬ ಅಭಿಪ್ರಾಯ ಸಭೆಯಲ್ಲಿ ಹಿರಿಯ ವೈದ್ಯರು, ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.‌ ಕೊರೋನಾ ಪೀಡಿತ ವ್ಯಕ್ತಿಗಳಿಂದ ಮತ್ತಷ್ಟು ಜನರಿಗೆ ಸೋಂಕು ಹರಡಿದರೆ ನಿಯಂತ್ರಣ ಮಾಡಲು ಕಷ್ಟ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಹಾಗೂ ವಿಶ್ವದ ವಿವಿಧೆಡೆ ಕೊರೋನಾ ಹರಡಲು ಕಾರಣವಾದ ಅಂಶಗಳು, ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ‌ನಡೆದು ಕೊನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ವಾರ ಕಾಲ ರಾಜ್ಯ ಬಂದ್ ಮಾಡುವ ನಿರ್ಧಾರಕ್ಕೆ ಸಮ್ಮತಿಸಿದರು ಎಂದು ವರದಿಗಳು ತಿಳಿಸಿದೆ.

Tags: C M B.S YADIYURAPPACoronaKarnataka BandhKarnataka state government
ShareTweetSendShare
Join us on:

Related Posts

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

by Shwetha
February 20, 2026
0

ರಾಜ್ಯ ರಾಜಕಾರಣದಲ್ಲಿ ದಲಿತ ಮುಖ್ಯಮಂತ್ರಿ ಮಾಡುವ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿ, ದಲಿತರು ಹಾಗೂ ಅಲ್ಪಸಂಖ್ಯಾತರಿಗೆ...

2028ರ ಸಿಎಂ ಗಾದಿಗೆ ಈಗಲೇ ಟವಲ್ ಹಾಕಿದ ದಳಪತಿಗಳು: ಕಮಲ ಪಾಳಯದ ಮುಂದೆ ಎಚ್‌ಡಿಕೆ ಇಟ್ಟ ಕಠಿಣ ಷರತ್ತುಗಳೇನು?

2028ರ ಸಿಎಂ ಗಾದಿಗೆ ಈಗಲೇ ಟವಲ್ ಹಾಕಿದ ದಳಪತಿಗಳು: ಕಮಲ ಪಾಳಯದ ಮುಂದೆ ಎಚ್‌ಡಿಕೆ ಇಟ್ಟ ಕಠಿಣ ಷರತ್ತುಗಳೇನು?

by Shwetha
February 20, 2026
0

ರಾಜ್ಯ ರಾಜಕಾರಣದಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎಂದು ಕಂಡರೂ, ಆಂತರಿಕವಾಗಿ ಭವಿಷ್ಯದ ಅಧಿಕಾರ ಹಂಚಿಕೆಯ ಲೆಕ್ಕಾಚಾರಗಳು ಜೋರಾಗಿವೆ. 2028ರ ವಿಧಾನಸಭಾ...

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

by Shwetha
February 20, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷದ ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಆರೋಗ್ಯ ಇಲಾಖೆಯ ನಿರ್ವಹಣೆ ಕುರಿತಂತೆ ಬಿಜೆಪಿ ಮಾಡಿದ್ದ...

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

by Shwetha
February 19, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಆಡಳಿತ ಪಕ್ಷದ ಶಾಸಕರ ಗುಂಪೊಂದು ದಿಢೀರ್ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ಪಡಸಾಲೆಯಲ್ಲಿ ತೀವ್ರ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram