ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ : ದಿಢೀರ್ ಮಳೆಗೆ ಕಾರಣ ಏನು ಗೊತ್ತಾ..?
ಬೆಂಗಳೂರು : ನಿನ್ನೆ ಮಧ್ಯಾಹ್ನದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದ ಬೆಂಗಳೂರು ಸೇರಿದಂತೆ ವಿವಿಧೆಡೆ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.
ನಿನ್ನೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಉಡುಪಿ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಿದೆ. ದಿಢೀರ್ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಗುಡುಗು ಸಿಡಿಲು ಸಹಿತ ನಾಲ್ಕು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಕಾರಣ : ರಾಜ್ಯದಲ್ಲಿ ದಿಢೀರ್ ಮಳೆಗೆ ಪ್ರಮುಖ ಕಾರಣ ಪೂರ್ವ ಅಲೆಗಳು. ಹೌದು..! ಚಳಿಗಾಲದಲ್ಲಿ ಸಾಮಾನ್ಯವಾಗಿ ಜನವರಿ ಮತ್ತು ಫೆಬ್ರವರಿ ಅವಧಿಯಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸುವುದಿಂದ ಆಗಾಗ ಮಳೆಯಾಗುತ್ತದೆ. ಅದರಂತೆ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪ್ರಬಲವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ.
ಜನವರಿಯಲ್ಲಿ ಎಷ್ಟು ವರ್ಷಗಳಿಗೊಮ್ಮೆ ಮಳೆ..?
ಸಾಮಾನ್ಯವಾಗಿ ಜನವರಿಯಲ್ಲಿ ಮಳೆಯಾಗೋದು ತೀರ ಅಪರೂಪ. ಆದರೂ ವರ್ಷದ ಆರಂಭದಲ್ಲೇ ಮಳೆ ಆರಂಭವಾಗಿದೆ. ಹವಾಮಾನ ತಜ್ಞರು ಹೇಳೋ ಪ್ರಕಾರ 30 ವರ್ಷದಲ್ಲಿ 4 ಅಥವಾ 5 ಬಾರಿ ಜನವರಿ ಮಳೆಯಾಗುತ್ತೆ ಅಂದಾಜಿಸಿದ್ದಾರೆ. ಅಂದ್ರೆ 5 ವರ್ಷಕ್ಕೊಮ್ಮೆ ಜನವರಿಯಲ್ಲಿ ಮಳೆಯಾಗೋದು ಸಾಮಾನ್ಯ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇನ್ನು ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ. ನಾಳೆ, ನಾಡಿದ್ದು, ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 10ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









