ಪ್ರಮುಖ ಹೈ ಫೈ ರಾಜಕೀಯ ಸುದ್ದಿಗಳು ..!
ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!
ಸಿದ್ದರಾಮಯ್ಯ ನೋವಿನ ಹೇಳಿಕೆ : ಡಿಕೆಶಿ ಹೇಳಿದ್ದೇನು..?
ಬೆಳಗಾವಿ : ನಾನು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗೋದು ನಮ್ಮವರಿಗೇ ಬೇಡವಾಗಿತ್ತು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ” ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿ ಆಗಲೆಂಬ ಬಯಕೆ ನಮಗಂತೂ ಇತ್ತು” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದವರು ನಾವು.
ಅವರು 2ನೇ ಬಾರಿಗೆ ಮುಖ್ಯಮಂತ್ರಿ ಆಗಲೆಂಬ ಬಯಕೆ ನಮಗಂತೂ ಇತ್ತು. ಆ ಬಗ್ಗೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಾನೇ ಭಾಷಣ ಮಾಡಿದ್ದೆ. ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಸೇರಿದಂತೆ ಎಲ್ಲರೂ ಸಂಪೂರ್ಣ ಆಶೀರ್ವಾದ ಮಾಡಿದ್ದರು. ಆದ್ರೆ ಸಿದ್ದರಾಮಯ್ಯನವರು ಯಾವ ದೃಷ್ಟಿಯಲ್ಲಿ ಹೇಳಿಕೆ ನೀಡಿದ್ದಾರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ.ಅಧ್ಯಯನ ಮಾಡಲು ಹೋಗಿಲ್ಲ. ಅವರು ಯಾರದಾದರೂ ಹೆಸರು ಪ್ರಸ್ತಾಪಿಸಿದ್ದರೆ ಪ್ರತಿಕ್ರಿಯಿಸಬಹುದಿತ್ತು. ಜನರಲ್ ಆಗಿ ಹೇಳಿದರೆ ನಾವು ಹೇಳಕ್ಕಾಗತ್ತಾ ಎಂದು ಪ್ರಶ್ನಿಸಿದರು.
ದೋಷ ಪರಿಹಾರಕ್ಕೆ ಮೈಲಾರಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಸಲ್ಲಿಸಿದ ಡಿಕೆಶಿ
ಬಳ್ಳಾರಿ: 2017ರಲ್ಲಿ ಕಾರ್ಣಿಕೋತ್ಸವ ಸಮಯದಲ್ಲಿ ಹೆಲಿಕಾಪ್ಟರ್ ಮೂಲಕ ಬಂದಿದ್ದ ಕಾರಣಕ್ಕೆ ದೋಷ ಪರಿಹಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೈಲಾರಲಿಂಗೇಶ್ವರ ಸ್ವಾಮಿಗೆ ಬೆಳ್ಳಿಗೆ ಹೆಲಿಕಾಪ್ಟರ್ ನೀಡಿ ಹರಕೆ ಸಲ್ಲಿಸಿದ್ದಾರೆ.
ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಬಳ್ಳಾರಿ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮೈಲಾರಪುರದ ಮೈಲಾರಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ ಶಿವಕುಮಾರ್, 2017ರ ದೋಷ ಪರಿಹಾರಕ್ಕೆ ಹೆಲಿಕಾಪ್ಟರ್ ಸೇವೆ ಸಲ್ಲಿಸಿದರು.
2017ರಲ್ಲಿ ಮೈಲಾರ ಕಾರ್ಣಿಕೋತ್ಸವ ಸಮಯದಲ್ಲಿ ಹೆಲಿಕಾಪ್ಟರ್ ಮೂಲಕ ಬಂದಿದ್ದೆ. ಆಗ ಈ ದೇವಾಲಯಕ್ಕೆ ಹೆಲಿಕಾಪ್ಟರ್ ನಲ್ಲಿ ಬರುವಂತಿಲ್ಲ, ದೋಷವಾಗಿದೆ ಎಂದು ಇಲ್ಲಿನ ಗುರುಗಳು ತಿಳಿಸಿದರು. ನಮ್ಮ ಕಾರ್ಯಕರ್ತರು ಹರಕೆ ಮಾಡಿಕೊಂಡು ಬೆಳ್ಳಿ ಹೆಲಿಕಾಪ್ಟರ್ ಮಾಡಿಸಿಕೊಂಡು ದೇವಾಲಯಕ್ಕೆ ನೀಡಿದ್ದಾರೆ. ಇಲ್ಲಿನ ಸಾವಿರಾರು ಜನ ನನಗಾಗಿ ಪೂಜೆ ಸಲ್ಲಿಸಿ ಹರಕೆ ಕಟ್ಟುಕೊಂಡಿದ್ದಾರೆ, ಹೀಗಾಗಿ ಇಲ್ಲಿಗೆ ಬಂದು ದೇವರಲ್ಲಿ ಕ್ಷಮೆಯಾಚಿಸಿ ರಾಜ್ಯದಲ್ಲಿ ನೆಮ್ಮದಿ ನೆಲೆಸಲಿ ಅಂತಾ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಮೈಸೂರಲ್ಲಿ ಕುಮಾರಸ್ವಾಮಿ ವಿರುದ್ಧ ಟಗರು ಗುಟುರು
ಮೈಸೂರು : ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ನಾನು ಸರ್ಕಾರ ಬಿಳಿಸಿದೆ ಅಂತಾನೆ. ನಾನು ಸರ್ಕಾರ ಬಿಳಿಸೋದಾಗಿದ್ರೆ ಕುಮಾರಸ್ವಾಮಿಯನ್ನ ಸಿಎಂ ಆಗೋದಕ್ಕೆ ಬಿಡ್ತಾ ಇರಲಿಲ್ಲ. 80 ಸೀಟು ಗೆದ್ದಿದೆ ನಾವು ಜೆಡಿಎಸ್‍ಗೆ ಸಪೋರ್ಟ್ ಮಾಡೋಲ್ಲ ಅಂದ್ರಿದ್ರೆ ಕುಮಾರಸ್ವಾಮಿ ಸಿಎಂ ಆಗ್ತಿದ್ರಾ ಎಂದು ಪ್ರಶ್ನಿಸಿದರು..
ಪರಿಷತ್ ಗಲಾಟೆ ಪೂರ್ವನಿಯೋಜಿತ ಸಂಚು ಎಂದ ಈಶ್ವರಪ್ಪ
ಹುಬ್ಬಳ್ಳಿ : ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಪೂರ್ವ ನಿಯೋಜಿತ ಸಂಚು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಈಶ್ವರಪ್ಪ, ವಿಧಾನ ಪರಿಷತ್ ಇತಿಹಾಸದಲ್ಲೇ ಈ ರೀತಿಯ ವಿಷಾದಕರ ಘಟನೆ ನಡೆದದ್ದು ಇದೇ ಮೊದಲು. ಪರಿಷತ್ ನಲ್ಲಿ ಬಿಜೆಪಿ, ಜೆಡಿಎಸ್ ಗೆ ಬಹುಮತ ಇರಲಿಲ್ಲವೆಂದು ರಾಜ್ಯದ ಜನರೆದುರು ಡಿಕೆಶಿ ಹಾಗೂ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ. ಬಂಡತನದಿಂದ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಮಾಡಿದ ಕುತಂತ್ರ ರಾಜಕಾರಣವಿದು. ಜೆಡಿಎಸ್, ಬಿಜೆಪಿ ಒಂದಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಪ್ರತಾಪ್ ಚಂದ್ರ ಶೆಟ್ಟಿ ಸಜ್ಜನ ರಾಜಕಾರಣಿ, ಅವರಿಗೂ ಕಪ್ಪು ಚುಕ್ಕೆ ಬರುವಂತೆ ಮಾಡಿದ್ದಾರೆ. ಇದೊಂದು ಪೂರ್ವನಿಯೋಜಿತ ಸಂಚು ಎಂದು ಕಿಡಿಕಾರಿದರು.
ಚಾಮುಂಡೇಶ್ವರಿಯಲ್ಲಿ ಜನರ ಎದುರು ನೋವು ತೋಡಿಕೊಂಡ ಸಿದ್ದರಾಮಯ್ಯ
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಎದುರು ನೋವು ತೋಡಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಇಷ್ಟೊಂದು ಕೆಟ್ಟದಾಗಿ ಸೋಲನುಭವಿಸುತ್ತೇನೆ ಎಂದುಕೊಂಡಿರಲಿಲ್ಲ.
ನಾನು ಪ್ರತೀ ಹಳ್ಳಿಗಳಿಗೆ ಹೋದಾಗ ಜನರೆಲ್ಲ ತುಂಬಾ ಪ್ರೀತಿ ತೋರಿಸಿದರು. ಆದರೆ ನನ್ನ ಸೋಲಿಗೆ ನಮ್ಮ ಪಕ್ಷದವರೂ ಕೂಡ ಕಾರಣರಾದರು. ಪಕ್ಷ ಅಂದರೆ ತಾಯಿ ಇದ್ದ ಹಾಗೆ. ಕ್ಷುಲ್ಲಕ ಕಾರಣಕ್ಕೆ ಪಕ್ಷ ದ್ರೋಹ ಮಾಡಬಾರದು. ಅವರಿಗೆ ಇಷ್ಟ ಇಲ್ಲ ಅಂದರೆ ಪಕ್ಷ ಬಿಟ್ಟು ಹೋಗಬೇಕು. ಪಕ್ಷ ಮುಖ್ಯವೇ ಹೊರತು ವ್ಯಕ್ತಿಗಳಲ್ಲ. ಪಕ್ಷಕ್ಕೆ ಯಾವುದೇ ವ್ಯಕ್ತಿಗಳು ಅನಿವಾರ್ಯವಲ್ಲ ಎಂದು ಸೋಲಿನ ಬೇಸರ ತೋಡಿಕೊಂಡರು.
ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel