ಬೆಂಗಳೂರು : ಕುರುಬ ಸಮುದಾಯವನ್ನು (Kuruba Community) ಎಸ್ಟಿ (ST) ಗೆ ಸೇರಿಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ. ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್ಟಿಗೆ ಸೇರಿಸಲಾಗಿತ್ತು.
ನಂತರ 2020-21ರಲ್ಲಿ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು. ಸದ್ಯ ಎಲ್ಲ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ.