ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ
ಹೊಸದಿಲ್ಲಿ, ಅಗಸ್ಟ್ 19: ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ಹಲವಾರು ದಿನಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿರುವ ಅವರ ಮಗ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರ ಪ್ರಮುಖ ನಿಯತಾಂಕಗಳು ನಿಯಂತ್ರಣದಲ್ಲಿ ಮುಂದುವರೆದಿದೆ ಮತ್ತು ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನವದೆಹಲಿಯ ಆಸ್ಪತ್ರೆಯಲ್ಲಿ ಮೆದುಳು ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮುಖರ್ಜಿ (84) ಗಂಭೀರ ಸ್ಥಿತಿಯಲ್ಲಿದ್ದರು. ಶಸ್ತ್ರಚಿಕಿತ್ಸೆಗೆ ಮುನ್ನ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಅವರಿಗೆ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ಟ್ವಿಟರ್ ನಲ್ಲಿ ತಮ್ಮ ತಂದೆಯ ಆರೋಗ್ಯದಲ್ಲಿ ಸುಧಾರಣೆಯ ಸಕಾರಾತ್ಮಕ ಚಿಹ್ನೆಗಳು ಕಂಡುಬಂದಿದೆ ಎಂದು ಮಾಹಿತಿ ನೀಡಿದರು. ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿ ಎಂದು ದೇಶದ ಜನರನ್ನು ಕೇಳಿಕೊಂಡ ಅಭಿಜಿತ್ ಮುಖರ್ಜಿ ಮಾಜಿ ರಾಷ್ಟ್ರಪತಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರ್ಮಿ ಆಸ್ಪತ್ರೆಯ ಆರ್ & ಆರ್ ವೈದ್ಯರ ತಂಡಕ್ಕೆ ಕೂಡ ಧನ್ಯವಾದಗಳನ್ನು ಅರ್ಪಿಸಿದರು.








