ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಾತಿ – ಸಚಿವ ಬಿ ಸಿ ನಾಗೇಶ್
ಬೆಂಗಳೂರು – ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದ್ದು, ಆದಷ್ಟು ಬೇಗ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸಭೆಯಲ್ಲಿಂದು ಹೇಳಿದ್ದಾರೆ.
ವಿಧಾನಸಭಾ ಸದಸ್ಯ ವೀರಭದ್ರಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವುದರಿಂದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಣೆಯಾಗಲಿದೆ ಎಂದು ತಿಳಿಸಿದ್ದಾರೆ. ಡಯಟ್ ಸಂಸ್ಥೆಗೆ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ನಕ್ಷೆ ಹಾಗೂ ಅಂದಾಜು ಪಟ್ಟಿ ತಯಾರಿಸಿ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ. ಅನುದಾನದ ಲಭ್ಯತೆ ಆಧರಿಸಿ ಮುಂಬರುವ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ವಿಜಯಪುರ ಸೇರಿದಂತೆ ವೈದ್ಯಕೀಯ ಕಾಲೇಜುಗಳು ಇಲ್ಲದ 9 ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
Recruitment of 15 thousand teachers soon – Minister B C Nagesh








