RECRUITMENT OF POLICE CONSTABLE POSTS | ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು : ಉದ್ಯೋಗಾಂಕ್ಷಿಗಳಿಂದ ರಾಜ್ಯ ಪೊಲೀಸ್ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಮ್ಮ ಸರ್ಕಾರ ಈ ಮೂಲಕ ಇಲಾಖೆಯ ಮಾನವ ಸಂಪನ್ಮೂಲಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದಿದ್ದಾರೆ.
ಸರ್ಕಾರದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಆದೇಶದಿಂದ ಅಭ್ಯರ್ಥಿಗಳಿಗೆ ಖುಷಿ ನೀಡಿದೆ.