ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್
ಉಡುಪಿ : ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಮೂರು ಜಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ವಾಡಿಕೆಯಂತೆ ಜೂನ್.1ರಂದೇ ಪ್ರವೇಶವಾಗಬೇಕಿದ್ದ ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳನ್ನು ಪ್ರವೇಶಿಸಿವೆ.
ಇಂದು ನೈಋತ್ಯ ಮುಂಗಾರು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ. ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಅತ್ಯಧಿಕ ಮಳೆ ಬೀಳುವುದರಿಂದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.










