ಕರ್ನಾಟಕದಲ್ಲಿ ಮತ್ತೆ ಮಳೆಯ ಆತಂಕ ಮೂಡಿದ್ದು, ಹವಾಮಾನ ಇಲಾಖೆ ಮುಂದಿನ 6 ದಿನಗಳ ಕಾಲ ಭಾರೀ ಮಳೆ ಬೀಳಲಿರುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ರೆಡ್ ಅಲರ್ಟ್‌ಗಳನ್ನು ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ತೀವ್ರ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾಧಾರಣದಿಂದ ಹೆಚ್ಚು ಮಳೆ ಬೀಳುವ ಸಂಭವವಿದೆ.
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ, ಆದರೆ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಗಾಳಿ-ಮಳೆ ಹೆಚ್ಚಾಗಬಹುದೆಂಬ ಮುನ್ಸೂಚನೆ ಇದೆ.








