ತಮಿಳುನಾಡು ಮಳೆ 27 ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಗೆ ತಮಿಳುನಾಡು ತತ್ತರಿಸಿ ಹೋಗಿತ್ತು. ಸದ್ಯಕ್ಕೆ ಅದರ ಪ್ರಭಾವ ಕಡಿಮೆಯಾಗಿದೆ ಎಂದುಕೊಳ್ಳುವಷ್ಟರಲ್ಲೆ..ಮತ್ತೊಂದದು ಚಂಡಮಾರುತ ತಮಿಳುನಾಡಿನ ಕರಾವಳಿಗೆ ಅಪ್ಪಳಿಸಲಿದೆ. ಗುರುವಾರ ಸುರಿದ ಮಳೆಗೆ ಕೆಲ ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ತಮಿಳುನಾಡಿನ ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಲ್ಲದೆ ಮುನ್ನೆಚ್ಚೆರಿಕೆ ಕ್ರಮವಾಗಿ ತಮಿಳುನಾಡಿನ 27 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸತತ ಮಳೆಯ ಹಿನ್ನೆಲೆಯಲ್ಲಿ ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ ಮತ್ತು ವಿಲ್ಲುಪುರಂ ಸಹ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಈಶಾನ್ಯ ಮಾನ್ಸೂನ್ ಆಗಮನ ಮತ್ತು ಭಾರೀ ಮಳೆಯಿಂದಾಗಿ ದೇವಾಲಯಗಳ ನಾಡು ರಾಮೇಶ್ವರಂಗೆ ಪ್ರವಾಹದ ಬಿಸಿ ತಟ್ಟಿದ್ದು ಯಾತ್ರಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಮೆಯಾಗಿದೆ ಎಂದು ಜಿಲ್ಲೆಯ ಪ್ರವಾಸೋದ್ಯಮ ಅಧಿಕಾರಿಗಳು ತಿಳಿಸಿದ್ದಾರೆ.