ಅರಬ್ಬಿ ಸಮುದ್ರದಲ್ಲಿ ತೌಕ್ಟೇ ಅಬ್ಬರ : ಕೊಡಗಿನಲ್ಲಿ ಇಂದು ಯೆಲ್ಲೋ, ನಾಳೆ ರೆಡ್ ಅಲರ್ಟ್ kodagu
ಕೊಡಗು : ಅರಬ್ಬಿ ಸಮುದ್ರದಲ್ಲಿ ತೌಕ್ಟೇ ಚಂಡಮಾರುತ ಅಬ್ಬರಿಸಲು ಶುರುವಾಗಿದ್ದು, ರಾಜ್ಯದಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇನ್ನು ಹವಾಮಾನ ಇಲಾಖೆಯ ಮಾಹಿತಿ ಮೇರೆಗೆ ಕೊಡಗಿನಲ್ಲಿ ಈಗಾಗಲೇ ಜಿಲ್ಲಾಡಳಿತ ಇಂದು ಮತ್ತು ನಾಳೆ ಕೊಡಗಿನ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
64 ಮಿಲಿ ಮೀಟರ್ ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಹೀಗಾಗಿ ಇಂದು ಎಲ್ಲೋ ಅಲರ್ಟ್, ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಕೊಡಗಿನಲ್ಲಿ 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.










