ನವದೆಹಲಿ: ನೂತನ ಹಣಕಾಸು ವರ್ಷದ ಮೊದಲ ದಿನ ಎಲ್ಪಿಜಿ ದರ ಕಡಿಮೆ ಮಾಡಲಾಗಿದ್ದು, ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. 5 ಕೆಜಿ ಎಫ್ ಟಿಎಲ್ ಸಿಲಿಂಡರ್ ಬೆಲೆ 7.50 ರೂ. ಇಳಿಕೆಯಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ.
19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1764.50 ರೂ. ದರವಾಗಿದೆ. ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1717.50 ರೂ. ಇದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1830 ರೂ. ಇಳಿಕೆಯಾಗಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆ ಪರಿಷ್ಕರಣೆ ಆಗಷ್ಟ್ ನಿಂದ ಆಗಿಲ್ಲ.