ರಾಯಚೂರು: ಕುಟುಂಬಸ್ಥರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ಮನನೊಂದು ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದ್ದು, ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎನ್ನಲಾಗಿದೆ. ಅಪ್ರಾಪ್ತೆ ಸಂಗೀತ, ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಅಲ್ಲದೇ, ಅಪ್ರಾಪ್ತೆಯಾಗಿದ್ದರೂ ಎರಡು ಬಾರಿ ಆತನೊಂದಿಗೆ ಹೋಗಿದ್ದಳು. ಆಗ ಹೆತ್ತವರು ಮರಳಿ ಮನೆಗೆ ಕರೆ ತಂದಿದ್ದರು. ಆದರೆ, ಈಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಆರೋಪಿ ಕೃಷ್ಣನನ್ನು ಬಂಧಿಸಿದ್ದಾರೆ. ಆರೋಪಿ ಕಾರು ಡ್ರೈವಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.