ಮದ್ದೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟದ ಘಟನೆ ಹಿನ್ನೆಲೆಯಲ್ಲಿ ಉದ್ರಿಕ್ತತೆ ಮುಂದುವರಿದಿದೆ. ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ BJP ಮಾಜಿ ಸಂಸದ ಪ್ರತಾಪ್ ಸಿಂಹ, ಬಂಧನದಲ್ಲಿರುವ ಹಿಂದೂ ಯುವಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಲು ಅವಕಾಶ ನೀಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು ಖಂಡನೀಯ. ಲಾಠಿ ಪ್ರಹಾರ ಮಾಡಿದ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅದೇ ವೇಳೆ, ಕಾರ್ಯಕರ್ತರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮತ್ತು ಸಮಾಧಾನದಿಂದ ಹೋರಾಟ ಮುಂದುವರಿಸುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ಮದ್ದೂರಿನ ಈ ಘಟನೆ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲೂ ಚರ್ಚೆ ಚುರುಕುಗೊಂಡಿದೆ.








