ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಪಿಎಂ ಕಿಸಾನ್ ಯೋಜನೆಯಡಿ 16ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.
9 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ಒಟ್ಟು 21,000 ಕೋಟಿ ರೂ. ಗೂ ಅಧಿಕ ಹಣವನ್ನು ಪ್ರಧಾನಿ ಮೋದಿ ಅವರು ರವಾನಿಸಿದ್ದಾರೆ. ದೇಶದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ತಲಾ 2 ಸಾವಿರ ರೂ. ಸಿಗಲಿದೆ.
ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2019ರಲ್ಲಿ ಆರಂಭಿಸಿದರು. ಸದ್ಯ ಇದು 16ನೇ ಕಂತಿಗೆ ಬಂದು ನಿಂತಿದೆ. ರೈತರಿಗೆ ಒಟ್ಟಾರೆ 3 ಲಕ್ಷ ಕೋಟಿ ರೂ ಹಣ ಸಿಕ್ಕಿದೆ. ಈ ಮೂಲಕ ಕೇಂದ್ರ ಸರ್ಕಾರವು ಅರ್ಹ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ಒದಗಿಸುತ್ತದೆ.
ಅಂದರೆ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಕೇಂದ್ರ ಸರ್ಕಾರದಿಂದ 2 ಸಾವಿರ ರೂ. ಸಿಗಲಿದೆ.