ಸಮೀಕ್ಷಾ ವರದಿ ಪಡೆದು ಕೂಡಲೇ ಪರಿಹಾರ ವಿತರಣೆ : ಬೊಮ್ಮಾಯಿ Bommai saaksha tv
ದಾವಣಗೆರೆ : ಬೆಳೆ ನಷ್ಟ ಸಂಬಂಧ ಸಮೀಕ್ಷಾ ವರದಿ ಬಂದ ಬಳಿಕ ಕೂಡಲೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ಮುಖ್ಯಮಂತ್ರಿ , ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಫಸಲು ನಷ್ಟವಾಗಿದೆ.
ಈ ಸಂಬಂಧ ಕೃಷಿ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮೀಕ್ಷಾ ವರದಿ ಪಡೆದು ಕೂಡಲೇ ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಅವರು ವಾಚಿಸಿದರು.
ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ , ಜಿ.ಎಂ. ಸಿದ್ದೇಶ್ವರ, ಮತ್ತಿತರರು ಉಪಸ್ಥಿತರಿದ್ದರು.