ಕಾರವಾರದ ಕದ್ರಾ ಜಲಾಶಯದಿಂದ ನೀರು ಬಿಡುಗಡೆ
ಕಾರವಾರ : ಭಾರಿ ಮಳೆಯಿಂದ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕಾರವಾರದ ಕದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ.
ಕದ್ರಾ ಜಲಾಶಯದಿಂದ ಕಾಳಿ ನದಿಗೆ 10 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ.
ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ ಇದ್ದು, ಇವತ್ತಿನ ನೀರಿನ ಮಟ್ಟ 31.50 ತಲುಪಿದೆ. ಈ ಹಿನ್ನಲೆಯಲ್ಲಿ ನೀರು ಹೊರ ಹರಿಸಲಾಗಿದೆ.
ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದೆ.
ಮಳೆ ಹೆಚ್ಚಿದ್ದರಿಂದ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದೆ.
ಈ ಹಿನ್ನೆಲೆಯಲ್ಲಿ ನದಿತೀರ ಪ್ರದೇಶದ ಜನರಿಗೆ ಕೆಪಿಸಿಎಲ್ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.