ಕಿಸ್ಸಿಂಗ್ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್…..
ನಟಿ ಶಿಲ್ಪಾ ಶೆಟ್ಟಿ ಇತ್ತೀಚೆಗೆ ವೈಯಕ್ತಿಕ ವಿಷಯಗಳ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. ಕುಟುಂಬ ಮತ್ತು ಮಕ್ಕಳೊಂದಿಗೆ ಬ್ಯುಸಿಯಾಗಿರುವ ಶಿಲ್ಪಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ದಶಕಗಳ ಹಿಂದೆ ನಡೆದ ಪ್ರಕರಣದಲ್ಲಿ ಶಿಲ್ಪಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ. ಹಾಗಾದರೆ ಪ್ರಕರಣವೇನು? ಶಿಲ್ಪಾ ವಿರುದ್ಧ ಏಕೆ ಮೊಕದ್ದಮೆ ಹೂಡಲಾಗಿತ್ತು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಅದು 2007. ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಿಲ್ಪಾ ಶೆಟ್ಟಿ ಭಾಗಿಯಾಗಿದ್ದರು. ಈ ಸಮಾರಂಭದಲ್ಲಿ ಹಾಲಿವುಡ್ ನಟ ರಿಚರ್ಡ್ ಗೇರ್ ಶಿಲ್ಪಾಗೆ ಮುತ್ತಿಟ್ಟರು. ಈ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಶೋನಲ್ಲಿ ಶಿಲ್ಪಾ ಶೆಟ್ಟಿ ಪೋರ್ನೋಗ್ರಫಿ ಮಾಡಿದ್ದಾರೆ ಎಂದು ಆರೋಪಿಸಿ ಶಿಲ್ಪಾ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ 15 ವರ್ಷಗಳಿಂದ ಪ್ರಕರಣ ನ್ಯಾಯಾಲಯದಲ್ಲಿದೆ. ಇದೀಗ ಈ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೇತಕಿ ಚವಾಣ್ ಪ್ರಕಾರ, 2007 ರಲ್ಲಿ ನಡೆದ ಘಟನೆಯ ನಂತರ ಶಿಲ್ಪಾ ಶೆಟ್ಟಿ ಸ್ಪಷ್ಟಪಡಿಸಿದ್ದರು. ಪೊಲೀಸ್ ವರದಿ ಮತ್ತು ದಾಖಲೆಗಳ ವಿರುದ್ಧ ಶಿಲ್ಪಾ ಅವರ ಪ್ರಕರಣವು ಆಧಾರರಹಿತವಾಗಿದೆ ಎಂದು ತಿಳಿದುಬಂದಿದೆ. Relief given to Shilpa Shetty in 2007 kissing case
ಅಶ್ಲೀಲ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ವಿರುದ್ಧ ರಾಜಸ್ಥಾನದಲ್ಲಿ ಎರಡು ಮತ್ತು ಗಾಜಿಯಾಬಾದ್‌ನಲ್ಲಿ ಒಂದು ಪ್ರಕರಣವಿದೆ. ಈ ಪ್ರಕರಣಗಳನ್ನು ಮುಂಬೈಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ 2017ರಲ್ಲಿ ಅನುಮತಿ ನೀಡಿತ್ತು. ಪ್ರಕರಣಗಳನ್ನು ಕೈಬಿಡುವಂತೆ ಶಿಲ್ಪಾ ಅರ್ಜಿ ಸಲ್ಲಿಸಿದ್ದರು. ಇದೀಗ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ.
ರಾಜ್ ಕುಂದ್ರಾ ಮತ್ತು ಅವರ ಪತ್ನಿ ಶಿಲ್ಪಾ ಶೆಟ್ಟಿ ಅವರಿಗೆ 2021 ಕಹಿ ವರ್ಷವಾಗಿತ್ತೂ. ಪೋರ್ನ್ ಸಿನಿಮಾ ಮಾಡಿದ್ದಕ್ಕಾಗಿ ರಾಜ್ ಕುಂದ್ರಾ ಜೈಲಿಗೆ ಹೋಗಿದ್ದರು. ರಾಜ್ ಕುಂದ್ರಾ ಜೈಲಿನಿಂದ ಹೊರಬಂದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಬದಲಾಗಿ ಸೈಲೆಂಟ್ ಆಗಿ. ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದರು. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಕ್ಕೆ ಕಂಬ್ಯಾಕ್ ಆಗಿದ್ದರು.