ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೆಪ್ಟೆಂಬರ್ 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ:

admin by admin
September 17, 2026
in Cinema, Newsbeat, Uncategorized, ಮನರಂಜನೆ
remada-oorali-movie-release-september-25-manoj-kumar-sriram-tapaswini-poonacha

remada-oorali-movie-release-september-25-manoj-kumar-sriram-tapaswini-poonacha

Share on FacebookShare on TwitterShare on WhatsappShare on Telegram

ಹಾಡುಗಳ ಸಂಭ್ರಮದೊಂದಿಗೆ ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ನೂತನ ಚಲನಚಿತ್ರ ‘ಪ್ರೇಮದ ಊರಲಿ’ ಸೆಪ್ಟೆಂಬರ್ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಜ್ಜಾಗಿದೆ.

Related posts

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

September 18, 2026
kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

September 18, 2026

ಶ್ರೀರಾಮ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ನಾಯಕಿಯರಾಗಿ ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು ಪ್ರಮುಖ ಪಾತ್ರದಲ್ಲಿದ್ದಾರೆ. ಇತ್ತೀಚೆಗೆ ನಡೆದ ಮಾಧ್ಯಮಗೋಷ್ಠಿಯಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ ಚಿತ್ರತಂಡ, ಸಿನಿಮಾ ನಿರ್ಮಾಣದ ಅನುಭವ ಹಾಗೂ ಹಾಡುಗಳಿಗೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿತು.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಮನೋಜ್ ಕುಮಾರ್, ಟೀಸರ್ ಮತ್ತು ಹಾಡುಗಳು ಬಿಡುಗಡೆಯಾದಾಗಿನಿಂದ ಮಾಧ್ಯಮಗಳು ಮತ್ತು ಪ್ರೇಕ್ಷಕರು ನೀಡುತ್ತಿರುವ ನಿರಂತರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು. “‘ಪ್ರೇಮದ ಊರಲಿ’ ಚಿತ್ರದ ಎಲ್ಲಾ ಹಾಡುಗಳು ಈಗಾಗಲೇ ಎಲ್ಲರ ಜನಮನ ಗೆದ್ದಿವೆ. ಇದು ನಾಗಣ್ಣನ ಸುಂದರ ಕುಟುಂಬದ ಕಥೆ. ಮನಮಿಡಿಯುವ ಪ್ರೇಮ, ಕುಟುಂಬದ ಬಾಂಧವ್ಯ ಮತ್ತು ಸಂಗೀತದ ಸುಗ್ಗಿ ಇದರಲ್ಲಿದೆ. ಚಿತ್ರಮಂದಿರದಲ್ಲೇ ನೋಡಿ ಆನಂದಿಸಬೇಕಾದ ಈ ಕೌಟುಂಬಿಕ ಚಿತ್ರ ಪ್ರತಿಯೊಬ್ಬ ಪ್ರೇಕ್ಷಕನಿಗೂ ಮೆಚ್ಚುಗೆಯಾಗಲಿದೆ ಎಂಬ ಅಚಲ ವಿಶ್ವಾಸ ನನಗಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಹಿರಿಯ ನಟ ರಂಗಾಯಣ ರಘು ಚಿತ್ರದ ಆಧಾರಸ್ತಂಭವಾಗಿ ನಿಂತಿದ್ದು, ಶ್ರೀರಾಮ್ ಮತ್ತು ನಾಯಕಿಯರ ಸಮರ್ಥ ಅಭಿನಯ ಚಿತ್ರಕ್ಕಿದೆ ಎಂದರು.

ಚಿತ್ರದ ನಾಯಕ ನಟ ಶ್ರೀರಾಮ್ ಮಾತನಾಡಿ, ಟೈಟಲ್ ಟ್ರ‍್ಯಾಕ್ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದು, ಬರೋಬ್ಬರಿ 1.5 ಲಕ್ಷಕ್ಕೂ ಹೆಚ್ಚು ರೀಲ್ಸ್ಗಳು ರೀಲ್ಸ್ ಗಳು ಸೃಜನಗೊಂಡಿವೆ ಎಂದು ಸಂತಸ ಹಂಚಿಕೊಂಡರು. ವಿಶೇಷವಾಗಿ ಆಟೋ ಚಾಲಕರು ಚಿತ್ರದ ಶೀರ್ಷಿಕೆಯ ಸ್ಟಿಕ್ಕರ್‌ಗಳನ್ನು ತಮ್ಮ ವಾಹನಗಳಲ್ಲಿ ಪ್ರೀತಿಯಿಂದ ಅಂಟಿಸಿಕೊಳ್ಳುತ್ತಿರುವುದನ್ನು ಸ್ಮರಿಸಿದರು, ಚಿತ್ರದ ಬೆನ್ನೆಲುಬಾಗಿ ನಿಂತ ನಿರ್ಮಾಪಕರಿಗೆ, ಉತ್ತಮ ದೃಶ್ಯಗಳನ್ನು ಕಟ್ಟಿಕೊಟ್ಟ ಛಾಯಾಗ್ರಾಹಕರಿಗೆ ಹಾಗೂ ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾಯಕಿಯರಿಗೆ ಶ್ರೀರಾಮ್ ಧನ್ಯವಾದ ತಿಳಿಸಿದರು. ನಾಯಕಿಯರಿಬ್ಬರೂ ಪ್ರೀತಿಯಿಂದ ನಮ್ಮ ಸಿನಿಮಾಕ್ಕೆ ಎಲ್ಲರನ್ನೂ ಅಹ್ವಾನಿಸಿದರು.

ಹಿರಿಯ ನಟ ರಂಗಾಯಣ ರಘು ಮಾತನಾಡಿ, ಇದು ನನ್ನ ಮನಸ್ಸಿಗೆ ನೆಮ್ಮದಿ ಕೊಟ್ಟ ಕಲಾವಿದನಾಗಿ ತೃಪ್ತಿ ಕೊಟ್ಟಂತಹ ಪಾತ್ರ ಮತ್ತು ಇದು ಗ್ರಾಮೀಣ ಸೊಗಡಿನ ಕಥೆ ಮತ್ತು ಕನ್ನಡದ ಮಣ್ಣಿನ ಕಥೆ ಹಾಗಾಗಿ ಈ ಚಲನಚಿತ್ರವು ಎಲ್ಲಾ ಕನ್ನಡಾಭಿಮಾನಿಗಳಿಗೆ ಖಂಡಿತಾ ಇಷ್ಟ್ಟವಾಗುತ್ತದೆ ಎಂದು ಹೇಳಿದರು.

ವೆನಿಲ್ಲಾ ಎಂಟರ್ಟೇನ್ಮೆಂಟ್ಸ್ ಮತ್ತು ಜಾನಕಮ್ಮ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಸುನಾದ್ ಗೌತಮ್ ಸಂಗೀತ ಸಂಯೋಜಿಸಿದ್ದಾರೆ. ರಾಜ್‌ಕಾಂತ್ ಎಸ್.ಕೆ ಅವರ ಛಾಯಾಗ್ರಹಣ ಹಾಗೂ ಹರ್ಷಿತ್ ಪ್ರಭು ಅವರ ಸಂಕಲನ ಚಿತ್ರಕ್ಕಿದೆ. ಸಂಗೀತ, ಪ್ರೇಮ ಹಾಗೂ ಭಾವನಾತ್ಮಕ ಕೌಟುಂಬಿಕ ಎಳೆಗಳೊಂದಿಗೆ ಮೂಡಿಬಂದಿರುವ ‘ಪ್ರೇಮದ ಊರಲಿ’ ಸೆಪ್ಟೆಂಬರ್ 25 ರಂದು ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಗಳಿಗೆ ಬರಲಿದೆ.

Tags: #PremadaOorali #ManojKumar #Sriram #TapaswiniPoonacha #RamikaShivu #RangayanaRaghu #SunadhGautam #KannadaCinema #Sandalwood #saakshatv
ShareTweetSendShare
Join us on:

Related Posts

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

hosa-jeevana-movie-eeno-hambala-song-released-srimurali-rangayana-raghu-prabhu-mundkur

ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆ

by admin
September 18, 2026
0

ಬೆಂಗಳೂರು* : ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ 'ಹೊಸ ಜೀವನ' ಚಿತ್ರದ ಮೊದಲ ಸುಮಧುರ ಗೀತೆ "ಏನೇನೋ ಹಂಬಲ..." ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ....

bail-movie-cheluve-kele-cheluve-romantic-song-released-shivarajkumar-october-2-release

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್: ಅಕ್ಟೋಬರ್ 2ಕ್ಕೆ ಸಿನಿಮಾ ತೆರೆಗೆ!

by admin
September 17, 2026
0

ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಬೇಲ್’ ಚಿತ್ರದಿಂದ ಮೊದಲ ರೊಮ್ಯಾಂಟಿಕ್ ಮೆಲೋಡಿ ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದ್ದು, ಸಂಗೀತ ಪ್ರೇಮಿಗಳ ಮನಗೆದ್ದಿದೆ....

rocking-star-yash-body-transformation-for-toxic-movie-panipuri-kitty

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by admin
September 17, 2026
0

ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಾಣಿಸಿಕೊಳ್ಳಲು ಭರ್ಜರಿಯಾಗಿ ದೇಹವನ್ನು ಹುರಿಗೊಳಿಸಿಕೊಂಡಿದ್ದರು. ಯಶ್ ಅವರ ಈ ಸಾಲಿಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram