ರೆಮ್ ಡಿಸಿವರ್ ಕಾಳದಂಧೆಗೆ ಕಡಿವಾಣ ಹಾಕಲು ಹೊರಟ ಸರ್ಕಾರ – ಮಾಸ್ಟರ್ ಪ್ಲಾನ್..!
ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಭಯಾನಕ ಸ್ವರೂಪ ಪಡೆದಿದ್ದು, ದಿನೇ ದಿನೇ ಸೋಂಕಿತರು ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ೀ ನಡುವೆ ಅನೇಕರು ಭಯದಿಂದಲೇ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳು ನಡೆಯುತ್ತಿದೆ..
ದೇಶದಲ್ಲಿ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಭಯದಲ್ಲೇ ಪ್ಯಾನಿಕ್ ಆಗುತ್ತಿದ್ದಾರೆ. ಸಣ್ಣ ನೆಗಡಿ , ಜ್ವರ ಕಾಣಿಸಿಕೊಂಡ್ರೂ ತಮಗೆ ಸೋಂಕಿದೆ ಎಂದು ಹೆದರಿಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ.
ಈ ನಡುವೆ ಲಸಿಕೆ , ರೆಮ್ ಡಿಸಿವಿರ್ ಗೂ ಬೇಡಿಕೆ ಹೆಚ್ಚಾಗಿದೆ. ಆದ್ರೆ ಇದನ್ನೇ ಕೆಲವರು ಅಸ್ತ್ರವಾಗಿಸಿಕೊಂಡು ಕಾಳಸಂತೆಯಲ್ಲಿ ಈ ಔಷಧವನ್ನ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದಾರೆ.. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
ಇದೀಗ ರೆಮ್ ಡಿಸಿವಿರ್ ಕಾಳೆದಂಧೆಕೋರರಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ರೆಮ್ ಡಿಸಿವಿರ್ ಹಂಚಿಕೆಯಾಗುತ್ತಿದ್ದಂತೆ ನೇರವಾಗಿ SMS ಮೂಲಕ ಸಂದೇಶ ಬರುವಂತೆ ಮಾಡಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.
ಸಾರ್ವಜನಿಕರು ಈ https://covidwar.karnataka.gov.in/service2 ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.
ಇನ್ನೂ ಸೋಂಕಿತ ವ್ಯಕ್ತಿಯ SRF IDಗೆ ರೆಮ್ ಡಿಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೂಡ ಸುಧಾಕರ್ ಮಾಹಿತಿ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.