ವಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮೋದಿ ಫೋಟೋ ಬೇಕಾ..?
ನವದೆಹಲಿ : ಕೊರೊನಾ ವಿರುದ್ಧ ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದೆ. ಈಗಗಾಲೇ ಅನೇಕರು ಲಸಿಕೆಯನ್ನ ಪಡೆದುಕೊಂಡಿದ್ದಾರೆ.
ಈ ಮಧ್ಯೆ ಕೊರೊನಾ ವಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮೋದಿ ಫೋಟೋ ಇರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಈ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗ ಸದ್ಯದಲ್ಲೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನ ಪ್ರಕಟಿಸದಂತೆ ಕೇಂದ್ರ ಸರ್ಕಾರಕ್ಕೆ ಕೋರಿದೆ.
ಚುನಾವಣೆ ನಡೆಯಲು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಇರುವ ವ್ಯಾಕ್ಸಿನೇಷನ್ ಪ್ರಮಾಣಪತ್ರ ನೀಡುವುದು ಚುನಾವಣಾ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯೆನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ.
ಕೇಂದ್ರಕ್ಕೆ ಈಸಿ ಬರೆದ ಪತ್ರದಲ್ಲಿ ಪ್ರಧಾನ ಮಂತ್ರಿಗಳ ಫೋಟೋಗಳು ಕಾಣಿಸಿಕೊಳ್ಳದಂತೆ ಕೇವಲ ಫಿಲ್ಟರ್ಗಳನ್ನು ಮಾತ್ರ ಬಳಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಪಿಟಿಐ ತಿಳಿಸಿದೆ.
ಮತ್ತೊಂದೆಡೆ, ತೃಣಮೂಲ ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯಿಸಿ, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬರಬೇಕಿದ್ದ ಕ್ರಿಡಿಟ್ ಅನ್ನು ಪ್ರಧಾನಿ ತನ್ನತ್ತ ಸೆಳೆದುಕೊಳ್ಳುತ್ತಾ ಅಧಿಕಾರವನ್ನ ದುರುಪಯೋಗ ಮಾಡಿಕೊಂಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.