`ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ’ ಹೆಸರು ಮರು ನಾಮಕರಣ

1 min read
North East Karnataka

`ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ’ ಹೆಸರು ಮರು ನಾಮಕರಣ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯ ಮೇರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು ಬದಲಿಸಲಾಗಿದೆ.

ಇಷ್ಟುದಿನ `ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ’ ಎಂದು ಕರೆಯಲಾಗುತ್ತಿದ್ದದ್ದನ್ನು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರು ನಾಮಕರಣ ಮಾಡಲಾಗಿದೆ.

North East Karnataka

ಈ ಕುರಿತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಪ್ರಕಟನೆ ಹೊರಡಿಸಿದ್ದು, ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಂ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈ ಭಾಗದವರು ಹೆಸರು ಬದಲಾವಣೆಗೆ ಬೇಡಿಕೆ ಇಟ್ಟಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd