ನವದೆಹಲಿ: ಕೊರೊನಾ ಹೊಡೆತಕ್ಕೆ ಇಡೀ ದೇಶವೇ ತಲ್ಲಣಗೊಂಡಿದೆ. ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ವಿಸ್ತರಿಸಲಾಗಿದ್ದು, ಈಗಾಗಲೇ ಅನೇಕ ಬ್ಯಾಂಕ್, ಕಂಪನಿಗಳು ಕೆಲಸಗಾರರಿಗೆ ವಿನಾಯಿತಿ ನೀಡಿದೆ. ಇದೀಗ ಸ್ಟಾರ್ಟ್ ಅಪ್ ಗಳಿಗೂ ಬಾಡಿಗೆ ವಿನಾಯಿತಿ ನೀಡಲಾಗಿದೆ.
ಈ ಬಗ್ಗೆ ಸ್ವತಃ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡುವ ಮೂಲಕ ಆದೇಶ ಹೊರಡಿಸಿದ್ದಾರೆ.
ಟ್ವೀಟ್ ನಲ್ಲೇನಿದೆ.?
ಭಾರತದಾದ್ಯಂತ 60 ಎಸ್ ಟಿಪಿಐ ಕೇಂದ್ರಗಳಿಂದ ಕಾರ್ಯನಿರ್ವಹಿಸುತ್ತಿರುವ ಸ್ಟಾರ್ಟ್ ಅಪ್ ಗಳಿಗೆ ಮಾಚ್ 1 ರಿಂದ ಜೂನ್ 30ರ ವರೆಗೆ ಬಾಡಿಗೆ ಪಾವತಿಸುವುದನ್ನು ಮನ್ನಾ ಮಾಡಲಾಗಿದೆ. ಇದರಿಂದ 3000 ಜನರಿಗೆ ಉದ್ಯೋಗ ನೀಡಿರುವ ಸುಮಾರು 200 ಸಣ್ಣ ಮತ್ತು ಮಧ್ಯಮ ಐಟಿ/ಐಟಿಇಎಸ್ ಘಟಕಗಳಿಗೆ ಪ್ರಯೋಜನವಾಗಲಿದೆ ಎಂದು ರವಿಶಂಕರ್ ಪ್ರಸಾದ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.








