ಸೋತವರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ : ಸ್ವಪಕ್ಷದವರ ವಿರುದ್ಧ ರೇಣುಕಾಚಾರ್ಯ ಗುಡುಗು
ದಾವಣಗೆರೆ : ಚುನಾವಣೆಯಲ್ಲಿ ಸೋತ ವ್ಯಕ್ತಿಯಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ. 105 ಶಾಸಕರ ಬೆಂಬಲದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸ್ವಪಕ್ಷದವರ ವಿರುದ್ಧ ಕಿಡಿಕಾರಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಅವರು, ಎರಡು ಮೂರು ಬಾರಿ ಗೆದ್ದವರಿಗೆ ಸಚಿವ ಸ್ಥಾನದ ಅವಕಾಶ ಕೊಡಿ.
ಗೆದ್ದವರಿಗೆ ಮಾತ್ರ ಅವಕಾಶ ಕೊಡಿ ಎಂದು ಪಕ್ಷದ ವರಿಷ್ಠರ ಬಳಿ ಕೇಳಿದ್ದೇನೆ. ಸೋತ ವ್ಯಕ್ತಿಯಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ.
105 ಶಾಸಕರ ಬೆಂಬಲದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳುವ ಮೂಲಕ ಸಿ.ಪಿ.ಯೋಗೀಶ್ವರ್, ವಿಶ್ವನಾಥ್, ಎಂಟಿಬಿ ನಾಗರಾಜ್ ಗೆ ಟಾಂಗ್ ನೀಡಿದರು.
ನನ್ನನ್ನು ರಾಜಕೀಯಕ್ಕೆ ಕರೆತಂದಿದ್ದು ಡಿ.ಕೆ.ಶಿವಕುಮಾರ್ : ಜಗ್ಗೇಶ್
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡಿದ ವಿಚಾರವಾಗಿ ಮಾತನಾಡಿ, ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆ ಮಾಡಿ ಹಣ ಬಿಡುಗಡೆ ಮಾಡಿದ್ದಾರೆ.
ಕೊಟ್ಟಿದ್ದು ತಪ್ಪೇನಿಲ್ಲ. ಅಂದು ಬಸವಣ್ಣನವರು ಸಾಮಾಜಿಕ ನ್ಯಾಯ ಕೊಟ್ಟಿದ್ದರು, ಅದೇ ರೀತಿ ಇಂದು ಯಡಿಯೂರಪ್ಪ ನವರು ನೀಡಿದ್ದಾರೆ. ಯಡಿಯೂರಪ್ಪ ಆಧುನಿಕ ಬಸವಣ್ಣ ಎಂದರು.
ಇದೇ ವೇಳೆ ಸಿಎಂ ವಿರುದ್ಧ ಪದೇ ಪದೇ ಹೇಳಿಕೆ ಕೊಡುತ್ತಿರುವ ಯತ್ನಾಳ್ ಬಗ್ಗೆ ಮಾತನಾಡಿ, ಯಡಿಯೂರಪ್ಪನವರ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಡೆಡ್ ಲೈನ್ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ, ಪಕ್ಷದ ವರಿಷ್ಠರು ಪಕ್ಷದ ಶಾಸಕಾಂಗದ ಸದಸ್ಯರು ಯಡಿಯೂರಪ್ಪನವರನ್ನು ನಮ್ಮ ನಾಯಕರೆಂದು ತೀರ್ಮಾನ ಮಾಡಿದ್ದೇವೆ. ಯತ್ನಾಳ್ ಡೆಡ್ ಲೈನ್ ಕೊಡುವುದು ಸರಿಯಲ್ಲ ಎಂದು ಯತ್ನಾಳ್ ನಡೆಯನ್ನು ರೇಣುಕಾಚಾರ್ಯ ಖಂಡಿಸಿದರು.
ಇನ್ನು ಹಾದಿ- ಬೀದಿಯಲ್ಲಿ ನಿಂತು ಮಾತನಾಡುವುದರಿಂದ ಪಕ್ಷದ ಗೌರವ ಕಡಿಮೆಯಾಗುವುದಿಲ್ಲ. ಯಾರು ಮಾತನಾಡುತ್ತಾರೋ ಅವರ ವರ್ಚಸ್ಸು ಕಡಿಮೆಯಾಗುತ್ತದೆ. ಇದು ಪಕ್ಷಕ್ಕೆ ಶೋಭೆ ತರುವ ವಿಚಾರವಲ್ಲ. ಸಿಎಂ ಸೀಟ್ ಖಾಲಿ ಇಲ್ಲ ಎಂದು ಸಿಎಂ ಬದಲಾವಣ ವಿಷಯಕ್ಕೆ ಪ್ರತಿಕ್ರಿಯಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel