ಸ್ವಪಕ್ಷದವರ ವಿರುದ್ಧವೇ ರೇಣುಕಾಚಾರ್ಯ ಗರಂ Saaksha Tv
ಬೆಂಗಳೂರು: ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ಕೊಟ್ಟಿರುವುದು ನಿಜ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಲಿಖಿತ ರೂಪದಲ್ಲಿ ದೂರು ನೀಡಿಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ. ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಜನವರಿ 27ರಂದು ಒಬ್ಬ ಸಚಿವರಿಗೆ ನಾನು ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೊನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಗೇ ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.