ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿದ್ದಾರೆ ಎನ್ನಲಾಗಿರುವ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್ (Mobile)ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ, ಮೊಬೈಲ್ ಮಾತ್ರ ಪತ್ತೆಯಾಗಿಲ್ಲ.
ಕೊಲೆಯ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷಿ. ಹೀಗಾಗಿ ಪೊಲೀಸರು ಮೊಬೈಲ್ ಗಾಗಿ ಹುಡುಕಾಟ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮೊಬೈಲ್ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆ ತಂದಿದ್ದಾರೆ. ಕೊನೆಯ ಬಾರಿಗೆ ಸಿಗ್ನಲ್ ಇದ್ದ ಜಾಗವನ್ನು ಸರ್ಚ್ ಮಾಡಿದಾಗ ರಾಜಕಾಲುವೆ ಜಾಗದಲ್ಲಿಯೇ ಕೊನೆಯ ಸಿಗ್ನಲ್ ಪತ್ತೆಯಾಗಿದೆ.
ಹೀಗಾಗಿಯೇ ಆರೋಪಿ ಪ್ರದೂಶ್ ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್‌ಮೆಂಟ್ ಹತ್ತಿರ ಕರೆದುಕೊಂಡು ಬಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್ ಹುಡುಕಾಡಿದ್ದಾರೆ. ಆದರೆ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ. ಜೂನ್ 8ರಂದು ದರ್ಶನ್ ಮತ್ತು ಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಅದೇ ದಿನ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು.