ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 14ನೇ ಆರೋಪಿ ಪ್ರದೋಶ್ ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ (Hindalaga Jail) ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.
ಹೈಕೋರ್ಟ್ ಆದೇಶದಂತೆ ಬಿಗಿ ಭದ್ರತೆಯಲ್ಲಿ ಪ್ರದೋಶ್ ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಸೇರಿದಂತೆ ಕೆಲವು ಆರೋಪಿಗಳು ರಾಜಾತಿಥ್ಯ ಪಡೆಯುತ್ತಿರುವ ಸಂಗತಿ ಬೆಳಕಿಗೆ ಬರುತ್ತಿದ್ದಂತೆ ಹಲವರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಯಿತು. ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಹಾಗೆ ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರದೋಶ್ ರನ್ನು ಸ್ಥಳಾಂತರಿಸಲಾಗಿತ್ತು. ಈಗ ಮತ್ತೆ ಪರಪ್ಪನ ಅಗ್ರಹಾರಕ್ಕೆ (Parappana Agrahara) ಪ್ರದೋಶ್ ನನ್ನು ರವಾನಿಸಲಾಗಿದೆ. ಬೆಳಗಾವಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗುತ್ತಿರುವುದಕ್ಕೆ ಪ್ರದೋಶ್ ಸಂತಸ ವ್ಯಕ್ತಪಡಿಸಿದ್ದಾನೆ.