ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಕೇಶವಮೂರ್ತಿಗೆ ಹೈಕೋರ್ಟ್ ನಿಂದ ಕಾರ್ತಿಕ್, ನಿಖಿಲ್ ನಾಯಕ್ ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಹತ್ಯೆ ಪ್ರಕರಣದಲ್ಲಿ ಕಾರ್ತಿಕ್, ಕೇಶವ್ಮೂರ್ತಿ, ನಿಖಿಲ್ ನಾಯಕ್ ಕ್ರಮವಾಗಿ ಎ 15, ಎ16, ಎ17 ಆರೋಪಿಗಳಾಗಿದ್ದರು.
ಆರೋಪಿಗಳ ವಿರುದ್ಧ ಸಾಕ್ಷ್ಯ ನಾಶ ಮಾಡಿರುವ ಆರೋಪವಿದೆ. ತನಿಖೆ ವೇಳೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸದ್ಯ ಈ ಮೂವರಿಗೆ ಜಾಮೀನು ಮಂಜೂರಾಗಿದೆ.








