ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಹಾಗೂ ಪ್ರಕರಣದ ಮೊದಲನೇ ಆರೋಪಿ ಪವಿತ್ರಾಗೌಡಗೆ (Pavithra Gowda) ಭಾರೀ ಶಾಕ್ ಎದುರಾಗಿದೆ.
ದರ್ಶನ್ ಸ್ನೇಹಿತೆ ಪವಿತ್ರಾಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಪವಿತ್ರಾಗೌಡ ಕೊಲೆಯ ದಿನ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ಮನೆಯಿಂದ ವಶಕ್ಕೆ ಪಡೆದಿದ್ದಾರೆ. ಅವನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.
ಹೀಗಾಗಿ ಪವಿತ್ರಾಗೌಡ ವಿರುದ್ಧ ಈ ಚಪ್ಪಲಿ ಪ್ರಬಲ ಸಾಕ್ಷಿಯಾಗಲಿದೆ. ಪಟ್ಟಣಗೆರೆ ಶೆಡ್ ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಮೇಲಿತ್ತು. ಈಗ ಅದೇ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ತಿಳಿದು ಬಂದಿದೆ.
ಕೊಲೆ ಪ್ರಕರಣ ಸಂಬಂಧ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ದಾಖಲೆ ಮಾಡಿಕೊಂಡಿದ್ದಾರೆ.