ಬೆಳಗಾವಿ: ಬೆಳಗಾವಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಲ್ಲಿ ಮಳೆಯಿಂದ ಉಂಟಾಗಿರುವ ನೆರೆ ಪರಿಸ್ಥಿತಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸುತ್ತೇನೆ. ಸಮೀಕ್ಷೆ ಬಳಿಕ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವೈಮಾನಿಕ ಸಮೀಕ್ಷೆ ನಡೆಸಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಚಿವರು, ಸಂಸದರು ಹಾಗೂ ಶಾಸಕರ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ನೆರೆಯಿಂದ ಆದ ಹಾನಿಯ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಯಡಿಯೂರಪ್ಪ, ಪ್ರವಾಹದಿಂದ ಆದ ನಷ್ಟದ ಬಗ್ಗೆ ತಕ್ಷಣವೇ ಅಂದಾಜು ಮಾಡಲು ಸಾಧ್ಯವಿಲ್ಲ. ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವೈಮಾನಿಕ ಸಮೀಕ್ಷೆಯಲ್ಲಿ ವಾಸ್ತವಿಕ ಪರಿಸ್ಥಿತಿ ಬಗ್ಗೆ ಖುದ್ದು ಪರಿಶೀಲನೆ ನಡೆಸುತ್ತೇನೆ. ಬಳಿಕ ಅಧಿಕಾರಿಗಳು ನೀಡುವ ವರದಿ ಬಗ್ಗೆ ಚರ್ಚಿಸಿ ರಾಜ್ಯಕ್ಕೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ನೆರೆಯಿಂದ ಹಾನಿಗೊಳಗಾದ ರೈತರು ಹಾಗೂ ಸಂತ್ರಸ್ಥರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಕೊರೊನಾದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಒಂದೆರಡು ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೀಗಾಗಿ ಪರಿಹಾರ ಕಾರ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಯಡಿಯೂರಪ್ಪ ಭರವಸೆ ನೀಡಿದರು.
ಮ್ಯಾಕ್ಸ್ ಟ್ರೇಲರ್ OUT.. ಕಿಚ್ಚನ ಮಾಸ್ ಲುಕ್ಗೆ ಫ್ಯಾನ್ಸ್ ಫಿದಾ
ನಟ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದು, ಈಗ ಮ್ಯಾಕ್ಸ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮ್ಯಾಕ್ಸಿಮಮ್ ಮಾಸ್ ಅವತಾರದಲ್ಲಿ...