Republic day : 74 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ಹಾ…
ಮೂರು ದಿನಗಳ ಭಾರತ ಭೇಟಿಗಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ಹಾ ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ್ದು, 74ನೇ ಭಾರತ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ಹಾ ಎಲ್ ಸಿಸಿ ಅವರಿಗೆ ರಾಷ್ಟ್ರಪತಿ ಭವನದಲ್ಲಿಂದು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಈಜಿಪ್ಟ್ ಅಧ್ಯಕ್ಷರು, ಭಾರತ ಮತ್ತು ಈಜಿಪ್ಟ್ ನಡುವಿನ ಸಂಬಂಧ 75 ವರ್ಷ ಹಳೆಯದು. ಈ ಭವ್ಯ ಸ್ವಾಗತಕ್ಕೆ ನಾನು ಭಾರತ ಸರ್ಕಾರಕ್ಕೆ ಅಭಾರಿಯಾಗಿದ್ದೇನೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಬಲವರ್ಧನೆಗೊಳ್ಳುವ ಆಶಾಭಾವನೆ ಹೊಂದಿದ್ದು, ಮುಖ್ಯ ಅತಿಥಿಯಾಗಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಹೇಳಿದರು.
ಇದಕ್ಕೂ ಮುನ್ನ, ಇದಕ್ಕೂ ಮೊದಲು ಇಂದು ಬೆಳಗ್ಗೆ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ಈಜಿಪ್ಟ್ ಅಧ್ಯಕ್ಷರನ್ನು ಭೇಟಿ ಮಾಡಿದರು.
Republic day: Egyptian President Abdel Fattah arrived as the chief guest for the 74th Republic Day…