Republic Day : ಈ ಬಾರಿ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕಿಲ್ಲ ಅವಕಾಶ..!!
ಇನ್ನೇನು ಗಣರಾಜ್ಯೋತ್ಸವಕ್ಕೆ 17- 18 ದಿನಗಳ ಬಾಕಿಯಿದೆ.. ಗಣರಾಜ್ಯೋತ್ಸವಕ್ಕೆ ದೆಹಲಿಯಲ್ಲಿ ನಡೆಯಲಿರುವ ಪರೇಡ್ ಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ..
ಅಂದ್ಹಾಗೆ ಪ್ರತಿ ವರ್ಷ ಪರೇಡ್ ನಲ್ಲಿ ನಾನಾ ರಾಜ್ಯಗಳ ಕಲೆ , ಸಂಸ್ಕೃತಿ ಪ್ರದರ್ಶನದ ಭಾಗವಾಗಿ ಸ್ಥಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತಿದೆ..
ಸತತ 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್ ನಲ್ಲಿ ನಮ್ಮ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನ ಜಗತ್ತಿಗೆ ಸಾರುವ ಸ್ಥಬ್ಧಚಿತ್ರಗಳು ಪಾಲ್ಗೊಳ್ಳುತ್ತಾ ಗಮನ ಸೆಳೆಯುತ್ತಿದ್ದವು.. ಆದ್ರೆ ಈ ವರ್ಷ ಕರುನಾಡಿಗೆ ಅನ್ಯಾಯವಾಗಿದೆ ಎಂದು ಜನರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ.. ಈ ಬಾರಿ ಕರ್ನಾಟಕದ ಸ್ಥಬ್ಧಚಿತ್ರಕ್ಕೆ ಪರೇಡ್ ನಲ್ಲಿ ಅವಕಾಶ ಸಿಕ್ಕಿಲ್ಲ..
ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು ಪರೇಡ್‍ನಲ್ಲಿ ಕರ್ನಾಟಕ 13 ವರ್ಷಗಳ ನಂತರ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದರು.
ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು. ಆದರೆ ಕೊನೆಯ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರನ್ನು ತಿರಸ್ಕರಿಸಲಾಗಿದೆ. ಅಲ್ಲದೇ ಇತರ ರಾಜ್ಯಗಳು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ.
ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡುತ್ತಿದ್ದಾರೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿರೋದಾಗಿ ವರದಿಯಾಗಿದೆ.. ಇತ್ತ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ತಪ್ಪಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ..