ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಮತ್ತು ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯಾ ಗೋಸ್ವಾಮಿ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ಮುಂಬೈಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಾಳಿಯಲ್ಲಿ ಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
#BREAKING | Arnab's message after being physically attacked by Congress goons #SoniaGoonsAttackArnab https://t.co/RZHKU3fdmK pic.twitter.com/SdAvoerhIH
— Republic (@republic) April 22, 2020
ನಿನ್ನೆ ಕೆಲಸ ಮುಗಿಸಿ ಕಾರಿನಲ್ಲಿ ಅರ್ನಬ್ ಗೋಸ್ವಾಮಿ ಹಾಗೂ ಸಾಮಿಯಾ ಗೋಸ್ವಾಮಿ ಸ್ಟುಡಿಯೋದಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಳಿಕ ಅರ್ನಬ್ ದಂಪತಿ ಎನ್.ಎಂ.ಜೋಶಿ ಮಾರ್ಗ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಮಾಡಿದ್ದ ಆರೋಪದ ಮೇಲೆ ನಿನ್ನೆ ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.