ADVERTISEMENT
Wednesday, November 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

admin by admin
May 11, 2021
in Newsbeat, State, ರಾಜ್ಯ
dr sudhakar saakshatv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Related posts

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

November 4, 2026
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

November 4, 2026

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6 ಕಂಟೇನರ್ ಗಳಲ್ಲಿ ಒಟ್ಟು 120 ಟನ್ ವೈದ್ಯಕೀಯ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರೈಲಿನಲ್ಲಿ ಕಳುಹಿಸಿಕೊಟ್ಟಿದೆ. ಕೇಂದ್ರ ಸರ್ಕಾರ ಎಲ್ಲ ರೀತಿಯಲ್ಲಿ ರಾಜ್ಯಕ್ಕೆ ಸಹಕಾರ ನೀಡಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜಕನವನ್ನು ಇಲ್ಲಿಗೇ ನೀಡಿದರೆ ಸಾಗಣೆಯ ಸಮಸ್ಯೆ ಇರುವುದಿಲ್ಲ. ರೈಲಿನಲ್ಲಿ ಪೂರೈಕೆ ಮಾಡಿದರೆ ಮೂರ್ನಾಲ್ಕು ದಿನ ಬೇಕಾಗುತ್ತದೆ. ಈ ಸಮಸ್ಯೆ ಬಗ್ಗೆ ವಿವರಿಸಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಕೋರಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ತೀರ್ಮಾನವಾಗುವ ವಿಶ್ವಾಸವಿದೆ. 125 ರಿಂದ 150 ಟನ್ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗುವುದು ಎಂಬ ಭರವಸೆ ದೊರೆತಿದೆ ಎಂದರು.

ಪ್ರತಿ ಜಿಲ್ಲೆಯ ಸಕ್ರಿಯ ಪ್ರಕರಣ, ಆಮ್ಲಜನಕ ಬೇಡಿಕೆ ನೋಡಿಕೊಂಡು ಪೂರೈಸಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಗೆ 30 ವೆಂಟಿಲೇಟರ್ ನೀಡಲಾಗುತ್ತಿದೆ. 150 ವೆಂಟಿಲೇಟರ್ ದಕ್ಷಿಣ ಕನ್ನಡದಲ್ಲಿ ಇದೆ. ಹಾಸನ ಜಿಲ್ಲೆಗೆ 50 ವೆಂಟಿಲೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸರ್ಕಾರ ಎಷ್ಟೇ ಕ್ರಮ, ಕಾನೂನು ತಂದರೂ ಜನರಿಗೆ ಜಾಗೃತಿ ಬೇಕು. ಏನೇ ಕ್ರಮ ಕೈಗೊಂಡರೂ ಸರ್ಕಾರ ಮಾಡುವುದು ತಪ್ಪು ಎಂಬ ವಾದ ಮಂಡಿಸಿದರೆ ಕಷ್ಟವಾಗುತ್ತದೆ. ಕೋವಿಡ್ ಸೋಂಕು ಕಡಿಮೆಯಾಗಲು 14 ದಿನ ಬೇಕು. ಈ ಸಮಯದಲ್ಲಿ ಜನರು ಸಹಕರಿಸಬೇಕು. ಸ್ವ ನಿಯಂತ್ರಣ ಹೇರಿಕೊಂಡು ಮನೆಯಲ್ಲೇ ಕ್ಷೇಮವಾಗಿದ್ದರೆ ಪ್ರಕರಣಗಳ ಸಂಖ್ಯೆ ಖಂಡಿತ ಕಡಿಮೆಯಾಗುತ್ತದೆ ಎಂದರು.

ಈ ಸೋಂಕು ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಬೇಗ ಔಷಧಿ, ಚಿಕಿತ್ಸೆ ನೀಡಬೇಕಾಗುತ್ತದೆ. ಅನೇಕ ಔಷಧಿಗಳು ಬರುತ್ತಿದೆ. ಎಲ್ಲವೂ ಆದಷ್ಟು ಶೀಘ್ರ ಸರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

Tags: #cmbsybengalurucentral governmentDr. SudhakarHealth Minister Dr K Sudhakarkarnatakakarnataka govt
ShareTweetSendShare
Join us on:

Related Posts

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

by Shwetha
November 4, 2026
0

ಬೆಂಗಳೂರು: ಕರ್ನಾಟಕವು ಹಿಂದೆಂದೂ ಕಾಣದಂತಹ ಭೀಕರ ಬರಗಾಲದ ಸುಳಿಗೆ ಸಿಲುಕಿದ್ದು, ಸಂಕಷ್ಟದಲ್ಲಿರುವ ಲಕ್ಷಾಂತರ ಅನ್ನದಾತರ ನೆರವಿಗೆ ಧಾವಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕದ ತಟ್ಟಿದೆ. ರಾಜ್ಯದ...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

by Shwetha
November 4, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಹರಿದಾಡಿದ್ದ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೊ ಪ್ರಕರಣ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ...

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

by Shwetha
November 4, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಕ್ತ...

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

by Shwetha
November 4, 2026
0

ಮುಂಬೈ: ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮನ್ನು ಏಕೆ ಬಾಕ್ಸ್ ಆಫೀಸ್ ಕಿಂಗ್ ಎಂದು ಕರೆಯುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಇನ್ನೆರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕುವುದು ಖಚಿತ: ನಾನು ಅಸ್ಪೃಶ್ಯ ಎಂದು ಅವರು ಮುಟ್ಟಲ್ಲ, ಕಾನೂನು ಪ್ರಕಾರ ನಾವೇ ಅವರನ್ನು ಮುಟ್ಟುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಗುಡುಗು

by Shwetha
November 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದೀಗ ವೈಯಕ್ತಿಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram