ಭಾರೀ ಮಳೆಯಿಂದಾಗಿ ಕೇದಾರನಾಥ (Kedarnath)ಟ್ರೆಕ್ ಮಾರ್ಗದಲ್ಲಿ ಸಿಲುಕಿಕೊಂಡಿದ್ದ 8495 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಉತ್ತರಾಖಂಡದ (Uttarakhand) ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು, ಕೇದಾರನಾಥ ಟ್ರೆಕ್ ಮಾರ್ಗದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಯಾತ್ರಾರ್ಥಿಗಳನ್ನು ಕಾರ್ಯಾಚರಣೆ ನಡೆಸಿ ಶನಿವಾರವೂ ರಕ್ಷಿಸಲಾಗಿದೆ. 1,101 ಜನರನ್ನು ಗೌರಿಕುಂಡ್-ಸೋನ್‌ಪ್ರಯಾಗ ಪರ್ಯಾಯ ಮಾರ್ಗ, ಕೇದಾರನಾಥ-ಚೌಮಾಸಿ ಟ್ರೆಕ್ ಮೂಲಕ ಮತ್ತು 414 ಜನರನ್ನು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಿಎಂ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯನ್ನು ಸಮರ್ಪಕವಾಗಿ ಮಾಡುವಂತೆ ಸೂಚಿಸಿದ್ದಾರೆ. “ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಚಿರಬಸಾ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಆದರೆ, ಹೆಚ್ಚಿನ ಜನರು ನಾಪತ್ತೆಯಾಗಿದ್ದಾರೆ ಎಂಬುವುದು ಸುಳ್ಳು. ಹಲವರನ್ನು ರಕ್ಷಿಸಿದ ನಂತರ ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ.
ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿಗಳ ಕುಟುಂಬಸ್ಥರು ನೇರವಾಗಿ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.








