ಬೆಂಗಳೂರು: ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ (Job Reservation for Kannadigas) ನೀಡುವ ಮಸೂದೆಗೆ ಸಚಿವ ಸಂಪುಟ (Karnataka Cabinet) ಅನುಮೋದನೆ ನೀಡಿದ್ದು, ಉದ್ಯಮಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಉದ್ಯಮಿ ಮೋಹನ್ ದಾಸ್ ಪೈ (Mohandas Pai) ಸೇರಿದಂತೆ ಹಲವರು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆ ವಿಚಾರವಾಗಿ ಟ್ವೀಟ್ ಮಾಡಿದ ಮೋಹನ್ ದಾಸ್ ಪೈ, ಮಸೂದೆಯನ್ನು ಜಾರಿಗೆ ತರಬಾರದು. ಈ ನಿರ್ಧಾರ ಸಂವಿಧಾನ ವಿರೋಧಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ? ಕಾಂಗ್ರೆಸ್ ಸರ್ಕಾರವು ಇಂತಹ ಮಸೂದೆ ಜಾರಿ ಮಾಡಲು ಮುಂದಾಗಿರುವುದು ನಂಬಲು ಅಸಾಧ್ಯ ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಯಾವುದೇ ಇಂಡಸ್ಟ್ರಿಗೂ ಈಗ ಜನರು ಬರುತ್ತಿಲ್ಲ. ಇದನ್ನು ನಮ್ಮ ರಾಜಕಾರಣಿಗಳು ಅರ್ಥ ಮಾಡಿಕೊಳ್ಳಲಿ. ನಾನು ಹುಟ್ಟಿದ್ದು, ಕೆಲಸ ಮಾಡುತ್ತಿರುವುದು ಕರ್ನಾಟಕದಲ್ಲೇ. ಸರ್ಕಾರ ಮೊದಲು ಒಳ್ಳೆಯ ಶಿಕ್ಷಣ ಕೊಡಬೇಕು. ಯಾರಿಗೆ ಶಿಕ್ಷಣ ಸಿಗುತ್ತೆ ಅವರಿಗೆ ಉದ್ಯೋಗ ಸಿಗುತ್ತೆ. ಈ ನಿರ್ಧಾರದಿಂದ ಕರ್ನಾಟಕದ ಹೆಸರು ಕೆಡಿಸುತ್ತಿದ್ದಾರೆ. ನೀವು ಯಾವ ರೀತಿಯ ತರಬೇತಿ ಕೊಡುತ್ತೀರಿ. ಈ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸುವ ಗುರಿಯು ತಂತ್ರಜ್ಞಾನದಲ್ಲಿ ನಮ್ಮ ಪ್ರಮುಖ ಸ್ಥಾನದ ಮೇಲೆ ಪರಿಣಾಮ ಬೀರಬಾರದು. ನುರಿತ ನೇಮಕಾತಿಗೆ ವಿನಾಯಿತಿ ನೀಡುವ ಎಚ್ಚರಿಕೆಗಳು ಇರಬೇಕು ಎಂದು ಕಿರಣ್ ಮಜುಂದಾರ್ ಬಯೋಕಾನ್ ಲಿಮಿಟೆಡ್ನ ಕಾರ್ಯನಿರ್ವಾಹಕ ಅಧ್ಯಕ್ಷ ಕಿರಣ್ ಮುಜುಂದಾರ್ ಹೇಳಿದ್ದಾರೆ.
ಆದರೆ, ಸ್ಥಳೀಯ ಮೀಸಲಾತಿಯನ್ನು ಕಡ್ಡಾಯಗೊಳಿಸಿ ಮತ್ತು ಮೇಲ್ವಿಚಾರಣೆ ಮಾಡಲು ಪ್ರತೀ ಕಂಪನಿಯಲ್ಲಿ ಸರ್ಕಾರಿ ಅಧಿಕಾರಿಯನ್ನು ನೇಮಕ ಮಾಡಿ. ಇದು ಭಾರತೀಯ ಐಟಿ ಮತ್ತು ಜಿಸಿಸಿಗಳನ್ನು ಹೆದರಿಸುತ್ತದೆ. ದೂರದೃಷ್ಟಿಯುಳ್ಳದ್ದು ಎಂದು ಆರ್.ಕೆ. ಮಿಶ್ರಾ ಹೇಳಿದ್ದಾರೆ. ಆದರೆ, ಬಹುತೇಕ ಉದ್ಯಮಿಗಳು ಮಾತ್ರ ಸರ್ಕಾರದ ನಡೆಯನ್ನು ವಿರೋಧಿಸುತ್ತಿವೆ.