ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಗೆ ಅನಾರೋಗ್ಯ ಕಾಡುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಕ್ತಿಕಾಂತ್ ದಾಸ್ ಅವರಿಗೆ ಆ್ಯಸಿಡಿಟಿ ಸಮಸ್ಯೆ ಎದುರಾಗಿತ್ತು, ಅವರು ಆರೋಗ್ಯವಾಗಿದ್ದಾರೆ, ಮುಂದಿನ ಎರಡ್ಮೂರು ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.
1960 ರ ನಂತರ ಸುದೀರ್ಘ ಸೇವೆ ಸಲ್ಲಿಸಿದ RBI ಮುಖ್ಯಸ್ಥರೆಂಬ ಹೆಸರು ಮಾಡಿದ್ದಾರೆ. ಭಾರತದ ಆರ್ಥಿಕ ಸ್ಥಿತಿಸ್ಥಾಪಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ, ರಕ್ಷಣಾವಾದ, ವ್ಯಾಪಾರ ಯುದ್ಧಗಳು ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳನ್ನು ಒಳಗೊಂಡಂತೆ ಬಾಹ್ಯ ಆಘಾತಗಳನ್ನು ನಿಭಾಯಿಸಲು ದೇಶವು ಉತ್ತಮವಾಗಿ ಸಿದ್ಧವಾಗಿದೆ ಎಂದು ಅವರು ಇತ್ತೀಚೆಗೆ ಹೇಳಿದ್ದರು.
ಶಕ್ತಿಕಾಂತ್ ದಾಸ್ (Shaktikanta Das) ಅವರನ್ನು RBI ಗವರ್ನರ್ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮತ್ತೆ ನೇಮಕ ಮಾಡಿತ್ತು.
ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ RBI ಗವರ್ನರ್ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿತ್ತು.








