ರಾತ್ರಿ ಊಟ ಸೇವಿಸಿ ಅಸ್ವಸ್ಥಗೊಂಡ ವಸತಿ ಶಾಲೆ ಮಕ್ಕಳು Saaksha Tv
ದಾವಣಗೆರೆ: ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಘಟನೆಯು ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ.
ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳು ನಿನ್ನೆ ರಾತ್ರಿ ಊಟ ಮಾಡಿದ್ದು, ಬೆಳಿಗ್ಗೆ ವಾಂತಿ, ಬೇಧಿ ಶುರುವಾಗಿದೆ. ಇದರಿಂದ ಸುಮಾರು 50 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ, ಅಸ್ವಸ್ಥರಾಗಿರುವ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದು, ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಇಂತಹದೆ ಘಟನೆಯೊಂದು ಹಿಂದೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ಪ್ರಾಥಮಿಕ ಶಾಲೆಯಲ್ಲಿ ನಡೆದಿತ್ತು. 81 ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದರು.