ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ
ಮೈಸೂರು : ಇಂದು ಶ್ರಾವಣ ಮಾಸದ ಎರಡನೇ ಶುಕ್ರವಾರವಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದ್ದಾರೆ.
ಈ ಕಾರಣಕ್ಕಾಗಿ ಜಿಲ್ಲಾಡಳಿತ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಿದೆ.
ಅದರಲ್ಲೂ ಇಂದು ವರಮಹಾಲಕ್ಷ್ಮಿ ಹಬ್ಬ, ಈಗಾಗಿ ದೇವಿ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರುತ್ತಾರೆ.
ಈ ಹಿನ್ನೆಲೆಯಲ್ಲಿ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿಬರ್ಂಧಿಸಿದ್ದಾರೆ.
ಅಂದಹಾಗೆ ಈಗಾಗಲೇ ಕೊರೊನಾದಿಂದ ವೀಕೆಂಡ್ ಕಫ್ರ್ಯೂ ಇರುವುದರಿಂದ ಶನಿವಾರ ಮತ್ತು ಭಾನುವಾರ ಬೆಟ್ಟಕ್ಕೆ ನಿಬರ್ಂಧ ಹೇರಲಾಗಿದೆ.