ಜಗತ್ತಿನಾದ್ಯಂತ ಕೊರೋನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದೇಶಿಗರು ಭಾರತಕ್ಕೆ ಆಗಮಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಹೆಚ್ಚುತ್ತಿರುವ ಕೊರೋನಾ ಭೀತಿಯಿಂದಾಗಿ ವಿದೇಶಿಗರಿಗೆ ನೀಡಲಾಗಿರುವ ಎಲ್ಲಾ ವೀಸಾಗಳನ್ನು ಏಪ್ರಿಲ್ 15ರ ವರೆಗೆ ಅಮಾನತುಗೊಳಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಬುಧವಾರ ಸಂಜೆ ಪ್ರಕಟಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ 66 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಇವರಲ್ಲಿ ಹೆಚ್ಚಿನವರು ವಿದೇಶಿ ಮೂಲದ ಪ್ರವಾಸಿಗರು.
ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಕೊರೋನಾ ವೈರಸ್ ಸೋಂಕು ಜಗತ್ತು ಕಂಡ ತೀವ್ರತರವಾದ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ್ದು, ಈ ಹಿಂದಿನ ವರ್ಷಗಳಲ್ಲಿ ಇಷ್ಟು ವೇಗವಾಗಿ ಹಬ್ಬಿದ ರೋಗ ಮತ್ತೊಂದಿಲ್ಲ ಎಂದು ಅಭಿಪ್ರಾಯ ಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








