ಶಿವಮೊಗ್ಗ: ಹೊಸ ವರ್ಷದ (New Year 2025) ಆಗಮನಕ್ಕೆ ಎಲ್ಲೆಡೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಹುತೇಕರು ಅಂದು ಪ್ರವಾಸಿ ತಾಣಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಜ.1 ರಿಂದ ಮಾ.15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಸಾಕಷ್ಟು ಜನ ಪ್ರವಾಸಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇನ್ನಿತರ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. 3 ತಿಂಗಳ ಕಾಲ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...







