ಮಣಿಪುರ(Manipur)ದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದ್ದು, ಓರ್ವ ಬಲಿಯಾಗಿದ್ದಾನೆ.
ಮಣಿಪುರದ ಖೋರೆಂಟಾಕ್ ಗ್ರಾಮದಲ್ಲಿ ಹಿಂಸಾಚಾರ ನಡೆದಿದೆ. ಈ ಘಟನೆಯಲ್ಲಿಯೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ವರದಿಯಂತೆ,10 ಗಂಟೆಗೆ ಕುಕಿ-ಜೋ ಗ್ರಾಮದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗ್ರಾಮದ ಸ್ವಯಂ ಸೇವಕರು ಭಾರೀ ಗುಂಡಿನ ದಾಳಿಗೆ ಪ್ರತಿಯಾಗಿ ಪ್ರತಿದಾಳಿ ನಡೆಸಿದ್ದರಿಂದ ಮೂವತ್ತು ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಸಾವನ್ನಪ್ಪಿದ್ದಾನೆ.
ಮಣಿಪುರದ ರಾಜಧಾನಿ ಇಂಫಾಲ್‌ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಅಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಜಿ ನಿರ್ದೇಶಕ ಕೆ ರಾಜೋ ಅವರ ನಿವಾಸವನ್ನು ಕಾವಲು ಕಾಯುತ್ತಿದ್ದ ಭದ್ರತಾ ಸಿಬ್ಬಂದಿಯಿಂದ ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದ್ದರು. ಜನಾಂಗೀಯ ಘರ್ಷಣೆಯಿಂದ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಹಲವಾರು ಜನರು ಗಾಯಗೊಂಡಿದ್ದಾರೆ.