ಆಪ್ ಗೆ ಸೇರ್ಪಡೆಯಾದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಬೆಂಗಳೂರು: ಶನಿವಾರ ಎಡಿಜಿಪಿ ಹುದ್ದೆಗೆ ರಾಜಿನಾಮೆ ನೀಡಿದ್ದ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ಅವರು ಇಂದು ಸೋಮವಾರ ಆಮ್ ಆದ್ಮಿ ಪಕ್ಷ ಸೇರಿದ್ದಾರೆ.
ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಇಂದು ಆಪ್ ನಾಯಕ ಹಾಗೂ ದೆಹಲಿಯ ಮುಖ್ಯಮಂತ್ರಿಯೂ ಆಗಿರುವ ಅರವಿಂದ ಕೇಜ್ರಿವಾಲ್ ಅವರಿಂದ ಸದಸ್ಯತ್ವ ಸ್ವೀಕರಿಸಿದ್ದಾರೆ.
ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆ ಅಂಗೀಕರಿಸಿತ್ತು.