ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಕಿಡ್ನಾಪ್ ಕೇಸ್ ಲ್ಲಿ ಅರೆಸ್ಟ್ ಆಗಿದ್ದು, ಕಣ್ಣೀರು ಸುರಿಸಿದ್ದಾರೆ.
ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಅಧಿಕಾರಿಗಳು ರೇವಣ್ಣ (HD Revanna) ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ನಿರಾಕರಿಸಿತ್ತು. ಹೀಗಾಗಿ ಎಸ್ ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕಾರಿನಲ್ಲಿ ಕಣ್ಣೀರು ಸುರಿಸಿದ್ದಾರೆ.
ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ದೇವೇಗೌಡರ ಮನೆಗೆ ತೆರಳಿದ್ದರು. ಅರ್ಧ ಗಂಟೆಯ ನಂತರ ಮನೆಯಿಂದ ರೇವಣ್ಣ ಅವರು ಹೊರಗಡೆ ಬಂದರು. ಈ ವೇಳೆ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿ ಕರೆದುಕೊಂಡು ಹೋದರು. ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಸಿಐಡಿ ಕಚೇರಿಯಲ್ಲಿ ತನಿಖೆ ನಡೆಸಲಾಗುತ್ತದೆ.
ಎಸ್ಐಟಿ ಅಧಿಕಾರಿಗಳು ಮೂರು ನೋಟಿಸ್ಗಳನ್ನು ಕೊಟ್ಟರೂ ರೇವಣ್ಣ ಸ್ಪಂದಿಸಿರಲಿಲ್ಲ. ಅಲ್ಲದೇ, ಕಳೆದ ಮೂರು ದಿನಗಳಿಂದ ದೇವೇಗೌಡರ ನಿವಾಸದಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿತ್ತು. ಇತ್ತ ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದರು. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಪೊಲೀಸರು ನಮಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ. ಪೊಲೀಸರೂ ಒತ್ತಡ ಹಾಕಿದ್ದಾರೆ ಎಂದು ಸಂತ್ರಸ್ತೆಯ ಮಗ ದೂರು ಸಲ್ಲಿಸಿದ್ದರು.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿಯನ್ನು ಬಂಧಿಸಲಾಗಿದೆ.